ದೆಹಲಿ ಪೊಲೀಸರ ಸಾಂದರ್ಭಿಕ ಚಿತ್ರ 
ದೇಶ

ನವದೆಹಲಿ: ಅಕ್ರಮವಾಗಿ ನೆಲೆಸಿದ್ದ ಆರು ಮಹಿಳೆಯರು ಸೇರಿದಂತೆ 10 ಬಾಂಗ್ಲಾ ಪ್ರಜೆಗಳ ಬಂಧನ

ಮಂಡವಾಲಿ ಪೊಲೀಸ್ ಠಾಣೆಯಲ್ಲಿ ದೊರೆತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿ, ಮೊದಲಿಗೆ ಬಾಂಗ್ಲಾದೇಶದ ಮಹಿಳೆಯೊಬ್ಬರನ್ನು ಬಂಧಿಸಲಾಯಿತು.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರು ಮಹಿಳೆಯರು ಸೇರಿದಂತೆ ಒಟ್ಟಾರೇ 10 ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ದೆಹಲಿಯ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದ ಆರು ಬಾಂಗ್ಲಾದೇಶಿ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಡವಾಲಿ ಪೊಲೀಸ್ ಠಾಣೆಯಲ್ಲಿ ದೊರೆತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿ, ಮೊದಲಿಗೆ ಬಾಂಗ್ಲಾದೇಶದ ಮಹಿಳೆಯೊಬ್ಬರನ್ನು ಬಂಧಿಸಲಾಯಿತು. ಆಕೆಯನ್ನು ವಿಚಾರಣೆಗೊಳಪಡಿಸಿದಾಗ ಪಹರ್‌ಗಂಜ್ ಪ್ರದೇಶದಲ್ಲಿ ಇನ್ನೂ ಐದು ಬಾಂಗ್ಲಾ ಮಹಿಳೆಯರು ಇರುವುದನ್ನು ಬಹಿರಂಗಪಡಿಸಿದರು. ತದನಂತರ ಉಳಿದ ಮಹಿಳೆಯರನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸ್ ಉಪ ಆಯುಕ್ತ (ಪೂರ್ವ) ಅಭಿಷೇಕ್ ಧನಿಯಾ ಮಾಹಿತಿ ನೀಡಿದ್ದಾರೆ.

ಆ ಮಹಿಳೆಯರ ಬಳಿ ಯಾವುದೇ ಮಾನ್ಯವಾದ ವೀಸಾ, ಪಾಸ್‌ಪೋರ್ಟ್ ಅಥವಾ ಪರವಾನಗಿಗಳು ಇರಲಿಲ್ಲ. ಸದ್ಯ ಮಹಿಳೆಯರನ್ನು ಸುರಕ್ಷಿತ ಕಸ್ಟಡಿಯಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ ವಾಯುವ್ಯ ದೆಹಲಿಯ ಆಜಾದ್‌ಪುರ ಸಬ್ಜಿ ಮಂಡಿ ಪ್ರದೇಶದಿಂದ ತೃತೀಯಲಿಂಗಿಗಳ ವೇಷದಲ್ಲಿದ್ದ ನಾಲ್ವರು ಅಕ್ರಮ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬಾಂಗ್ಲಾದೇಶದ ನಾರಾಯಣಗಂಜ್ ನಿವಾಸಿಗಳಾದ ಮೊಹಮ್ಮದ್ ಅರ್ಮಾನ್ (21), ಮೊಹಮ್ಮದ್ ಆರಿಫ್ (26), ಮೊಹಮ್ಮದ್ ಜಾಹಿದ್ (21) ಮತ್ತು ಮೊಹಮ್ಮದ್ ಬಾಬುಲ್ (40) ಎಂದು ಗುರುತಿಸಲಾಗಿದೆ.

ಅಕ್ರಮವಾಗಿ ಗಡಿ ದಾಟಿ ಏಜೆಂಟರ ಸಹಾಯದಿಂದ ಭಾರತ ಪ್ರವೇಶಿಸಿದ್ದು, ತದನಂತರ ರೈಲಿನಲ್ಲಿ ದೆಹಲಿಗೆ ಪ್ರಯಾಣಿಸಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದು, ಅವರ ಬಳಿಯಿದ್ದ ಎರಡು ಸ್ಮಾರ್ಟ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಮುಂದಿನ ಗಡೀಪಾರು ಪ್ರಕ್ರಿಯೆಗಳಿಗಾಗಿ ಎಲ್ಲಾ ಆರೋಪಿಗಳನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

SCROLL FOR NEXT