ಏರ್ ಇಂಡಿಯಾ ವಿಮಾನ ಸಾಂದರ್ಭಿಕ ಚಿತ್ರ 
ದೇಶ

ಕ್ಷಿಪಣಿ ದಾಳಿ ಬೆದರಿಕೆ: ಇಸ್ರೇಲ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಬು ದಾಬಿಗೆ ಮಾರ್ಗ ಬದಲು!

ಬೋಯಿಂಗ್ 787 ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI 139 ಟೆಲ್ ಅವೀವ್‌ನಲ್ಲಿ ಇಳಿಯುವ ಒಂದು ಗಂಟೆಯ ಮೊದಲು ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಇಸ್ರೇಲ್ ನ ಟೆಲ್ ಅವಿವ್ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನ ಅಬುಧಾಬಿಗೆ ಮಾರ್ಗ ಬದಲಿಸಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಟೆಲ್ ಅವಿವ್ ವಿಮಾನಗಳನ್ನು ಮೇ 6 ರವರೆಗೆ ಸ್ಥಗಿತಗೊಳಿಸಿದೆ.

ಬೋಯಿಂಗ್ 787 ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI 139 ಟೆಲ್ ಅವೀವ್‌ನಲ್ಲಿ ಇಳಿಯುವ ಒಂದು ಗಂಟೆಯ ಮೊದಲು ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ ನಂತರ ದೆಹಲಿಯಿಂದ ಟೆಲ್ ಅವೀವ್ ನತ್ತ ಹೊರಟ್ಟಿದ್ದ AI 139 ಏರ್ ಇಂಡಿಯಾ ವಿಮಾನವನ್ನು ಅಬುದಾಬಿಯತ್ತ ತಿರುಗಿಸಲಾಯಿತು.

ಈ ವಿಮಾನ ಅಬುದಾಬಿಯಲ್ಲಿ ಸಹಜವಾಗಿ ಲ್ಯಾಂಡ್ ಆಗಿದ್ದು, ಶೀಘ್ರದಲ್ಲಿಯೇ ದೆಹಲಿಗೆ ಮರಳಲಿದೆ ಎಂದು ಏರ್ ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆ ಖಚಿತಪಡಿಸಿಕೊಳ್ಳಲು ಮೇ 6 ರವರೆಗೆ ತಕ್ಷಣವೇ ಜಾರಿಗೆ ಬರುವಂತೆ ಟೆಲ್ ಅವಿವ್‌ಗೆ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಏರ್‌ಲೈನ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಕಾವೇರಿ ಜಲ ವಿವಾದ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ, ಅ.12ಕ್ಕೆ ವಿಚಾರಣೆ ಮುಂದೂಡಿಕೆ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ