ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್‌: ಅಂತಾರಾಷ್ಟ್ರೀಯ ಗಡಿ ಬಳಿ ಪಾಕ್ ಒಳನುಸುಳುಕೋರನ ಬಂಧನ- BSF

ಅಂತಾರಾಷ್ಟ್ರೀಯ ಗಡಿ ಬಳಿ ಭಾರತದ ಭೂಪ್ರದೇಶದೊಳಗೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ.

ಪಂಜಾಬ್ : ಅಂತಾರಾಷ್ಟ್ರೀಯ ಗಡಿ ಬಳಿ ಭಾರತದ ಭೂಪ್ರದೇಶದೊಳಗೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮೇ 3 ರಂದು ರಾತ್ರಿ ಸಹಪುರ್ ಬಾರ್ಡರ್ ಔಟ್ ಪೋಸ್ಟ್ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ BSF ಪಡೆಗಳು ಗಡಿ ಬೇಲಿಯ ಮುಂದೆ ಸುಮಾರು 250 ಮೀಟರ್‌ಗಳಷ್ಟು ಭಾರತದ ಭೂಪ್ರದೇಶದೊಳಗೆ ಅನುಮಾನಾಸ್ಪದ ವ್ಯಕ್ತಿಯೊಬ್ಬ ಓಡಾಡುತ್ತಿರುವುದನ್ನು ಗಮನಿಸಿದ್ದಾರೆ.

ತದನಂತರ ಆ ವ್ಯಕ್ತಿಯನ್ನು ಪಾಕಿಸ್ತಾನಿ ಪ್ರಜೆ ಎಂದು ಗುರುತಿಸಲಾಗಿದ್ದು, ಪೊದೆಗಳಲ್ಲಿ ಅಡಗಿಕೊಂಡಿರುವುದು ಕಂಡುಬಂದಿತು. ತಕ್ಷಣ ಕ್ಷಿಪ್ರ ಕಾರ್ಯಪಡೆಗಳೊಂದಿಗೆ ಇಡೀ ಪ್ರದೇಶವನ್ನು ಸುತ್ತುವರೆದ BSF ಪಡೆಗಳು ಪಾಕಿಸ್ತಾನಿ ಪ್ರಜೆಯನ್ನು ತಡರಾತ್ರಿ ಯಶಸ್ವಿಯಾಗಿ ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

24 ವರ್ಷದ ಪಾಕಿಸ್ತಾನಿ ಪ್ರಜೆಯನ್ನು ಗುಜ್ರನ್‌ವಾಲಾ ಗ್ರಾಮದ ಹುಸ್ನೇನ್ ಎಂದು ಗುರುತಿಸಲಾಗಿದ್ದು, ಪ್ರಾಥಮಿಕ ವಿಚಾರಣೆಗಾಗಿ ಗಡಿ ಹೊರಠಾಣೆಗೆ ಕರೆತರಲಾಗಿದೆ. ಆತನಿಂದ ಕೆಲವು ಪಾಕಿಸ್ತಾನಿ ಕರೆನ್ಸಿ ಮತ್ತು ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel