ನ್ಯಾ. ಯಶವಂತ್ ವರ್ಮಾ  
ದೇಶ

ನ್ಯಾ. ವರ್ಮಾ ಮನೆಯಲ್ಲಿ ನಗದು ಪತ್ತೆ ಪ್ರಕರಣ: ತನಿಖಾ ಸಮಿತಿಯಿಂದ ಸಿಜೆಐಗೆ ವರದಿ ಸಲ್ಲಿಕೆ

ಮಾರ್ಚ್ 14 ರಂದು ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿತ್ತು.

ನವದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಗದು ಪತ್ತೆ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ನೇಮಿಸಿದ್ದ ಮೂವರು ನ್ಯಾಯಾಧೀಶರ ತನಿಖಾ ಸಮಿತಿಯು ಸೋಮವಾರ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿಗೆ ವರದಿ ಸಲ್ಲಿಸಿದೆ.

ಮಾರ್ಚ್ 14 ರಂದು ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಾರ್ಚ್ 25 ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಜಿ.ಎಸ್. ಸಂಧವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಅನು ಶಿವರಾಮನ್ ಅವರನ್ನು ಒಳಗೊಂಡ ಮೂವರು ಸದಸ್ಯರ ತನಿಖಾ ಸಮಿತಿ ರಚಿಸಿತ್ತು.

ನ್ಯಾಯಮೂರ್ತಿ ವರ್ಮಾ ವಿರುದ್ಧದ ಆರೋಪಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸಮಿತಿಗೆ ನಿರ್ದೇಶನ ನೀಡಿತ್ತು.

ಸುಪ್ರೀಂ ನಿರ್ದೇಶನದಂತೆ ಮೂವರು ನ್ಯಾಯಾಧೀಶರ ತನಿಖಾ ಸಮಿತಿಯು ದೆಹಲಿಯ 30 ತುಘಲಕ್ ಕ್ರೆಸೆಂಟ್‌ನಲ್ಲಿರುವ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ ತನಿಖೆ ನಡೆಸಿದೆ.

ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನ್ಯಾಯಮೂರ್ತಿ ವರ್ಮಾ ಅವರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಕೊಠಡಿ ಮತ್ತು ನಗದು ಪತ್ತೆಯಾಗಿದೆ ಎಂದು ಹೇಳಲಾದ ಕೊಠಡಿ ಒಂದು ಔಟ್‌ಹೌಸ್ ಆಗಿದ್ದು, ಅದು ನ್ಯಾಯಾಧೀಶರು ಮತ್ತು ಕುಟುಂಬ ವಾಸಿಸುವ ಮುಖ್ಯ ಕಟ್ಟಡವಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

Asian Games 2026: 'ಈಗ ಮಾಡು ಡಾಕ್ಯುಮೆಂಟರಿ': ಬುಮ್ರಾ ವೇಗದ ಹೊಡೆತಕ್ಕೆ ಪತರುಗುಟ್ಟಿದ ಪಾಕ್ ನಾಯಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!