ಭಾರತ-ಯುಕೆ ಸಾಂದರ್ಭಿಕ ಚಿತ್ರ 
ದೇಶ

ಪಾಕ್ ಜೊತೆಗೆ ಯುದ್ಧದ ಕಾರ್ಮೋಡ ನಡುವೆ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ!

ಭಾರತ ಮತ್ತು ಯುಕೆ ಮಹತ್ವಾಕಾಂಕ್ಷೆಯ ಮತ್ತು ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿವೆ. ಇದು ಐತಿಹಾಸಿಕ ಮೈಲುಗಲ್ಲು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ.

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಯಲ್ಲಿ ಪಾಕಿಸ್ತಾನದ ಜೊತೆಗೆ ಯುದ್ಧದ ಕಾರ್ಮೋಡ ಆವರಿಸಿರುವಂತೆಯೇ, ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ.

ಭಾರತ ಮತ್ತು ಯುಕೆ ಮಹತ್ವಾಕಾಂಕ್ಷೆಯ ಮತ್ತು ಪರಸ್ಪರ ಲಾಭದಾಯಕ ಮುಕ್ತ ವ್ಯಾಪಾರ ಒಪ್ಪಂದವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿವೆ. ಇದು ಐತಿಹಾಸಿಕ ಮೈಲುಗಲ್ಲು ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ.

ದ್ವಿಪಕ್ಷೀಯ ಹೂಡಿಕೆ ಮತ್ತು ಸಾಮಾಜಿಕ ಭದ್ರತಾ (Double Contribution Convention pact) ಒಪ್ಪಂದವನ್ನು ಸಹ ಭಾರತ ಮತ್ತು ಯುಕೆ ದೃಢಪಡಿಸಿವೆ. ಈ ಹೆಗ್ಗುರುತಿನ ಒಪ್ಪಂದಗಳು ನಮ್ಮ ಸಮಗ್ರ ಕಾರ್ಯತಂತ್ರದ ಸಂಬಂಧಗಳನ್ನು ಇನ್ನಷ್ಟು ದೃಢಗೊಳಿಸುತ್ತವೆ ಎಂದು ಮೋದಿ ಹೇಳಿದ್ದಾರೆ.

ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಮಾತನಾಡಿದ ನಂತರ ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ (FTA) ಮತ್ತು ಡಬಲ್ ಕಾಂಟ್ರಿಬ್ಯೂಷನ್ ಕನ್ವೆನ್ಷನ್ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಮೋದಿ ಘೋಷಿಸಿದರು. ಇದರಿಂದ ಉಭಯ ರಾಷ್ಟ್ರಗಳ ಆರ್ಥಿಕತೆಗಳಲ್ಲಿ ವ್ಯಾಪಾರ, ಹೂಡಿಕೆ, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ವೇಗ ಹೆಚ್ಚಾಗಲಿದೆ ಎಂದು ಅವರು ತಿಳಿಸಿದ್ದಾರೆ.

ವ್ಯಾಪಾರ- ವ್ಯವಹಾರಕ್ಕೆ ಹೊಸ ಹೊಸ ಅವಕಾಶಗಳು ತೆರೆಯಲಿವೆ ಎಂದು ಪ್ರಧಾನಿ ಮೋದಿ ಹಾಗೂ ಯುಕೆ ಪ್ರಧಾನಿ ಸ್ಟಾರ್ಮರ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯೊಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT