ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಾಮಾಜಿಕ ಜಾಲತಾಣದ ಮೂಲಕ ಸ್ನೇಹ; ಮದುವೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿವಾಹಿತ ವ್ಯಕ್ತಿ

ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ಸಾಂದರ್ಭಿಕ ಚಿತ್ರ
Ramyashree GN
Updated On : 6 May 2025, 2:13 pm

ಅನುಪ್ಪುರ್ (ಮಧ್ಯ ಪ್ರದೇಶ): ಸಾಮಾಜಿಕ ಮಾಧ್ಯಮದ ಮೂಲಕ ಸ್ನೇಹ ಬೆಳೆಸಿದ್ದ ವಿವಾಹಿತ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

27 ವರ್ಷದ ಆರೋಪಿಯು ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಅರವಿಂದ್ ಜೈನ್ ತಿಳಿಸಿದ್ದಾರೆ.

ವ್ಯಕ್ತಿಯು ಬಾಲಕಿಯೊಂದಿಗೆ ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಇಬ್ಬರು ಫೋನ್‌ನಲ್ಲಿ ಪರಸ್ಪರ ಮಾತನಾಡುತ್ತಿದ್ದರು. ಶಹದೋಲ್ ಜಿಲ್ಲೆಯ ಅಮ್ಲೈ ನಿವಾಸಿಯಾಗಿರುವ ಆರೋಪಿ ವಿರುದ್ಧ ಸೋಮವಾರ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

Advertisement

ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

Also Read

ಮಧ್ಯ ಪ್ರದೇಶ: ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ಮೇಲೆ ಎರಡು ದಿನ ನಾಲ್ವರಿಂದ ಅತ್ಯಾಚಾರ; ಆರು ಮಂದಿ ಬಂಧನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement