ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಕೇಡರ್ ಹತ್ಯೆ

ಏಪ್ರಿಲ್ 24 ರಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

ರಾಯ್‌ಪುರ: ತೆಲಂಗಾಣಕ್ಕೆ ಹೊಂದಿಕೊಂಡಿರುವ ಬಿಜಾಪುರದ ನೈಋತ್ಯ ಅರಣ್ಯ ಗಡಿ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಮವಸ್ತ್ರದಲ್ಲಿದ್ದ ಮಹಿಳಾ ಮಾವೋವಾದಿಯೊಬ್ಬರು ಹತರಾಗಿದ್ದಾರೆ ಎಂದು ಬಸ್ತಾರ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಏಪ್ರಿಲ್ 24 ರಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

ಕಳೆದ 12 ದಿನಗಳಲ್ಲಿ 10,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ಒಳಗೊಂಡ "ನಿರ್ಣಾಯಕ" ಅಂತರ-ರಾಜ್ಯ ಕಾರ್ಯಾಚರಣೆಯಲ್ಲಿ ಇದುಯವರೆಗೆ ನಿಷೇಧಿತ ಸಿಪಿಐ(ಮಾವೋವಾದಿಗಳ ಮಹಿಳಾ ಕೇಡರ್‌ಗಳು)ನ ನಾಲ್ವರ ಶವಗಳು, ಹಲವಾರು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

"ಬಿಜಾಪುರ ಜಿಲ್ಲೆಯ ನೈಋತ್ಯ ಗಡಿ ಪ್ರದೇಶಗಳಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಜಿಲ್ಲಾ ಮೀಸಲು ಪಡೆ(DRG), ವಿಶೇಷ ಕಾರ್ಯಪಡೆ(STF), CRPF ಮತ್ತು ಅದರ ಕೋಬ್ರಾ ಪಡೆಯ ಸಿಬ್ಬಂದಿಯನ್ನು ಒಳಗೊಂಡ ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದೆ.

ಕಾರ್ಯಾಚರಣೆ ನಡೆಯುತ್ತಿರುವಾಗ, ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ಆರಂಭಿವಾಯಿತು. ಬಳಿಕ ಘಟನಾ ಸ್ಥಳದಿಂದ ಮಹಿಳಾ ಮಾವೋವಾದಿಯ ಮೃತದೇಹ ಮತ್ತು ಒಂದು ರೈಫಲ್ ಅನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಬಸ್ತಾರ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರರಾಜ್ ಪಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT