ದೆಹಲಿ ವಿಮಾನ ನಿಲ್ದಾಣ 
ದೇಶ

Operation Sindoor​: 18 ವಿಮಾನ ನಿಲ್ದಾಣ ತಾತ್ಕಾಲಿಕ ಬಂದ್; 200ಕ್ಕೂ ಹೆಚ್ಚು ವಿಮಾನ ರದ್ದು

ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿರುವ ಕನಿಷ್ಠ 18 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಭಾರತೀಯ ಸೇನೆ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಪರಿಣಾಮ 200ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಮತ್ತು ಶ್ರೀನಗರ ಸೇರಿದಂತೆ ಕನಿಷ್ಠ 18 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳು ವಿವಿಧ ವಿಮಾನಗಳ ಸೇವೆಗಳನ್ನು ರದ್ದುಗೊಳಿಸಲಾಗಿದೆ.

ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿರುವ ಕನಿಷ್ಠ 18 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ಸೇರಿದಂತೆ 18 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇಂಡಿಗೋ ಸುಮಾರು 160 ವಿಮಾನಗಳ ಸೇವೆಯನ್ನು ರದ್ದುಗೊಳಿಸಿದೆ. ದೇಶದ ಅತಿದೊಡ್ಡ ಮತ್ತು ಜನನಿಬಿಡ ವಿಮಾನ ನಿಲ್ದಾಣವಾದ ದೆಹಲಿ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಅಲ್ಲಿಂದ ತೆರಳುವ ಕನಿಷ್ಠ 35 ವಿಮಾನಗಳನ್ನು ಬೆಳಗ್ಗೆ 12 ಗಂಟೆಯಿಂದ ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT