ಆಪರೇಷನ್ ಸಿಂಧೂರ್  
ದೇಶ

'ಜೈ ಹಿಂದ್, ನ್ಯಾಯ ಸಿಕ್ಕಿದೆ': ಭಾರತೀಯ ಸೇನೆ ಪೋಸ್ಟ್, ರಕ್ಷಣಾ ಸಚಿವಾಲಯದ ಸ್ಪಷ್ಟನೆ, ಜಮ್ಮು-ಕಾಶ್ಮೀರದಲ್ಲಿ ಸಂಭ್ರಮಾಚರಣೆ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ನಿಂದ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಜಮ್ಮು-ಕಾಶ್ಮೀರ ಸೇರಿದಂತೆ ದೇಶಾದ್ಯಂತ ಸಂಭ್ರಮಾಚರಣೆ ಜೋರಾಗಿದೆ.

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ನಿಂದ 100ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಜಮ್ಮು-ಕಾಶ್ಮೀರ ಸೇರಿದಂತೆ ದೇಶಾದ್ಯಂತ ಸಂಭ್ರಮಾಚರಣೆ ಜೋರಾಗಿದೆ.

ಸಂಭ್ರಮಾಚರಣೆ, ಜಮ್ಮು-ಕಾಶ್ಮೀರದಲ್ಲಿ ರಜೆ

ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ದೇಶಾದ್ಯಂತ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಜಮ್ಮು-ಕಾಶ್ಮೀರದಲ್ಲಿ ವಿಶೇಷವಾಗಿ ದೇಶಪ್ರೇಮಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಜಮ್ಮು-ಕಾಶ್ಮೀರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಧ್ಯರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲಿ ಕ್ಷಿಪಣಿ ದಾಳಿ ಮಾಡಿದೆ. ಪಾಕಿಸ್ತಾನದ 9 ಸ್ಥಳಗಳ ಮೇಲೆ ದಾಳಿ ನಡೆದಿದೆ. ಈ ದಾಳಿಯಲ್ಲಿ ಅನೇಕ ಭಯೋತ್ಪಾದಕರು ಮೃತಪಟ್ಟಿದ್ದಾರೆ. ದಾಳಿಯ ನಂತರ, ಭಾರತೀಯ ಸೇನೆಯು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿ, ‘‘ಜೈ ಹಿಂದ್, ನ್ಯಾಯ ಸಿಕ್ಕಿದೆ (Justice is Served. Jai Hind!)’’ ಎಂದು ಉಲ್ಲೇಖಿಸಿದೆ. ಈ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಮೊದಲು, ‘‘ಸೈನ್ಯವು ದಾಳಿ ಮಾಡಲು ಸಿದ್ಧವಾಗಿದೆ, ಗೆಲ್ಲಲು ತರಬೇತಿ ಪಡೆದಿದೆ’’ ಎಂದು ಪೋಸ್ಟ್ ಮಾಡಿತ್ತು.

ರಕ್ಷಣಾ ಸಚಿವಾಲಯವು ಈ ದಾಳಿಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದೆ. ಪಾಕಿಸ್ತಾನದ ವಿರುದ್ಧ ತೆಗೆದುಕೊಂಡ ಈ ಕ್ರಮಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರಿಸಲಾಗಿದೆ. ‘‘ನೇಪಾಳಿ ಪ್ರಜೆ ಸೇರಿದಂತೆ 26 ಜನರ ಪ್ರಾಣವನ್ನು ಬಲಿ ಪಡೆದ ಬರ್ಬರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ನಿಖರ ಮತ್ತು ಸಂಯಮದ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂಧೂರ್ ಪ್ರಾರಂಭಿಸಿದೆ’’ ಎಂದು ರಕ್ಷಣಾ ಸಚಿವಾಲಯ ಪೋಸ್ಟ್ ಮಾಡಿದೆ.

ಉಗ್ರರಷ್ಟೇ ಟಾರ್ಗೆಟ್, ಪಾಕ್ ಸೇನೆ ಅಲ್ಲ: ಅನಗತ್ಯ ಪ್ರಚೋದನೆ ಇಲ್ಲ ಎಂದ ರಕ್ಷಣಾ ಸಚಿವಾಲಯ

ಕಾರ್ಯಾಚರಣೆಯ ವಿವರಗಳನ್ನು ನೀಡಿರುವ ರಕ್ಷಣಾ ಸಚಿವಾಲಯವು, ಗಡಿಯಾಚೆಗಿನ ಭಯೋತ್ಪಾದನಾ ಪೋಷಣೆಯ ಬೇರುಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ 9 ಭಯೋತ್ಪಾದಕ ಮೂಲಸೌಕರ್ಯ ತಾಣಗಳನ್ನು ಕೇಂದ್ರೀಕರಿಸಿ ದಾಳಿಗಳನ್ನು ನಡೆಸಲಾಗಿದೆ. ಮುಖ್ಯವಾಗಿ, ಯಾವುದೇ ಪಾಕಿಸ್ತಾನಿ ಸೇನಾ ಸೌಲಭ್ಯದ ಮೇಲೆ ದಾಳಿ ನಡೆದಿಲ್ಲ. ಅನಗತ್ಯ ಪ್ರಚೋದನೆಯನ್ನು ಹಬ್ಬಿಸುವುದು ಬೇಡ. ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡುವ ಭಾರತದ ಸಂಕಲ್ಪವನ್ನು ಈ ಕಾರ್ಯಾಚರಣೆ ಪ್ರತಿಬಿಂಬಿಸುತ್ತದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್