ಪಾಕಿಸ್ತಾನದ ಒಂಬತ್ತು ಉಗ್ರ ನೆಲೆ ಮೇಲೆ ಭಾರತ ಸೇನೆ ದಾಳಿ 
ದೇಶ

Operation Sindoor: ಪಾಕಿಸ್ತಾನದ ಒಂಬತ್ತು ಉಗ್ರ ನೆಲೆ ಮೇಲೆ ಭಾರತ ಸೇನೆ ಪ್ರತೀಕಾರದ ದಾಳಿ; Video

ಈ "ನಿಖರ ದಾಳಿ"ಗಳಲ್ಲಿ ಕ್ಷಿಪಣಿಗಳನ್ನು ಬಳಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾತ್ರಿಯಿಡೀ ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಿದರು.

ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.

ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು 'ಆಪರೇಷನ್ ಸಿಂಧೂರ್' ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಯಿತು ಎಂದು ಭಾರತೀಯ ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿದೆ.

ಭಾರತೀಯ ಸೇನೆಯ ದಾಳಿಗೊಳಗಾದ ಸ್ಥಳ

ಒಟ್ಟು ಒಂಬತ್ತು ತಾಣಗಳ ಮೇಲೆ ದಾಳಿ ಮಾಡಲಾಗಿದೆ" ಎಂದು ಹೇಳಿಕೆ ಸೇರಿಸಲಾಗಿದೆ. ಈ "ನಿಖರ ದಾಳಿ"ಗಳಲ್ಲಿ ಕ್ಷಿಪಣಿಗಳನ್ನು ಬಳಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾತ್ರಿಯಿಡೀ ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಿದರು ಎಂದು ಅಸೋಸಿಯೇಟೆಡ್ ಪ್ರೆಸ್‌ಗೆ ಹೆಸರು ಬಹಿರಂಗಪಡಿಸಲು ಬಯಸದ ಭಾರತೀಯ ಅಧಿಕಾರಿಯೊಬ್ಬರು ಹೇಳಿದರು.

ಆಪರೇಷನ್ ಸಿಂಧೂರ್ ಎಂದರೇನು?

ಭಾರತದ ಆಪರೇಷನ್ ಸಿಂಧೂರ್ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ನಡೆಸುತ್ತಿರುವ ಸರ್ಜಿಕಲ್ ಸ್ಟ್ರೈಕ್ ಆಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, 9 ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ ಎನ್ನಲಾಗಿದೆ.

ಪಾಕಿಸ್ತಾನದ ಸೇನೆಯು ಆರು ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆದಿದೆ ಎಂದು ಹೇಳಿದೆ. ಕಾರ್ಯಾಚರಣೆಯಲ್ಲಿ ನಿಷೇಧಿತ ಜೈಶ್ –ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‌ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‌ನಲ್ಲಿನ ಸರ್ಜಾಲ್, ಕೋಟ್ಲಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‌ನ ಸೈಯದ್ನಾ ಬಿಲಾಲ್ ಕ್ಯಾಂಪ್‌ಗಳ ಮೇಲೆ ಭಾರತ ದಾಳಿ ನಡೆಸಿದೆ.

ಲಷ್ಕರ್‌–ಎ–ತಯಬಾ ಉಗ್ರ ಸಂಘಟನೆಯ ಶಿಬಿರಗಳಿರುವ ಮುರ್ಡಿಕೆಯ ಮರ್ಕಝ್ ತೈಬಾ, ಬರ್ನಾಲಾದಲ್ಲಿ ಮರ್ಕಝ್ ಅಹ್ಲೆ ಹದಿತ್ ಮತ್ತು ಮುಜಫರಾಬಾದ್‌ನ ಶ್ವವಾಯಿ ನಲ್ಲಾ ಮೇಲೆ ದಾಳಿ ನಡೆದಿದೆ.

ಮಧ್ಯರಾತ್ರಿ 1.44ರ ಸುಮಾರಿಗೆ ಭಾರತ ಕ್ಷಿಪಣಿ ದಾಳಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳ ಕ್ರಮಗಳು ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಬದಲಾಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ದಾಳಿಗೆ ಆಯ್ದುಕೊಂಡ 9 ಸ್ಥಳಗಳಲ್ಲಿ 4 ಪಾಕಿಸ್ತಾನದಲ್ಲಿದ್ದರೆ ಇನ್ನುಳಿದ ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT