ರಾಜನಾಥ್ ಸಿಂಗ್  
ದೇಶ

'ಆಪರೇಷನ್ ಸಿಂಧೂರ್': 100 ಉಗ್ರರ ಹತ್ಯೆ, ಪಾಕಿಸ್ತಾನ ದಾಳಿ ಮಾಡಿದರೆ ಸುಮ್ಮನೆ ಬಿಡಲ್ಲ; ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್

ಗಡಿ ನಿಯಂತ್ರಣ ರೇಖೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸದಂತೆ ಪಾಕಿಸ್ತಾನ ತನ್ನದೇ ಆದ ಮಿಲಿಟರಿ ಪ್ರತಿಕ್ರಿಯೆಯನ್ನು ಪರಿಗಣಿಸುತ್ತಿದೆ ಎಂದು ವರದಿಗಳು ಸೂಚಿಸುತ್ತವೆ ಎಂದು ಸಹ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್‌ನಲ್ಲಿ ಕನಿಷ್ಠ 100 ಉಗ್ರರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಗುರುವಾರ ಸರ್ವಪಕ್ಷ ಸಭೆಯಲ್ಲಿ ದೃಢಪಡಿಸಿದ್ದಾರೆ.

ಗಡಿ ನಿಯಂತ್ರಣ ರೇಖೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸದಂತೆ ಪಾಕಿಸ್ತಾನ ತನ್ನದೇ ಆದ ಮಿಲಿಟರಿ ಪ್ರತಿಕ್ರಿಯೆಯನ್ನು ಪರಿಗಣಿಸುತ್ತಿದೆ ಎಂದು ವರದಿಗಳು ಸೂಚಿಸುತ್ತವೆ ಎಂದು ಸಹ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ಇನ್ನೊಂದು ದಾಳಿ ಮಾಡಲ್ಲ, ತಂಟೆಗೆ ಬಂದರೆ ಬಿಡಲ್ಲ

ಆಪರೇಷನ್ ಸಿಂಧೂರ್ ಒಂದು "ನಡೆಯುತ್ತಿರುವ ಕಾರ್ಯಾಚರಣೆ". ಭಾರತವು ಮತ್ತಷ್ಟು ದಾಳಿಗಳನ್ನು ನಡೆಸಬೇಕಾಗಿಲ್ಲ. ಆದರೆ ಪಾಕ್ ಪಡೆಗಳು ದಾಳಿ ಮಾಡಿದರೆ ಮತ್ತೆ ಪ್ರತಿದಾಳಿ ನಡೆಸುತ್ತದೆ ಎಂದು ಕೂಡ ಸಚಿವರು ಎಚ್ಚರಿಕೆ ನೀಡಿದರು.

ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸಲು ತನ್ನ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ವಿರೋಧ ಪಕ್ಷಗಳು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಭರವಸೆ ನೀಡಿದವು. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಹೇಳಿದ್ದನ್ನು ನಾವು ಕೇಳಿದ್ದೇವೆ ... ಕೆಲವು ಮಾಹಿತಿಯನ್ನು ಗೌಪ್ಯವಾಗಿಡಬೇಕು ಎಂದು ಕೇಂದ್ರ ಸರ್ಕಾರದ ಸಚಿವರು ತಿಳಿಸಿದ್ದಾರೆ. ನಾವೆಲ್ಲರೂ ಸರ್ಕಾರದೊಂದಿಗಿದ್ದೇವೆ' ಎಂದು ಹೇಳಿದ್ದೇವೆ ಎಂದರು.

ಸರ್ವಪಕ್ಷಗಳ ಸಭೆಯನ್ನು ಸೌಹಾರ್ದಯುತ ರೀತಿಯಲ್ಲಿ ನಡೆಸಲಾಯಿತು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ಬಗ್ಗೆ ಪ್ರತಿಕ್ರಿಯಿಸುತ್ತಾ, ಎಲ್ಲರೂ "ಪ್ರಬುದ್ಧತೆಯನ್ನು ತೋರಿಸಿದ್ದಾರೆ ಎಂದು ವರದಿಗಾರರಿಗೆ ತಿಳಿಸಿದರು. ಈ ಸಭೆಯು "ವಿಶಾಲ ರಾಜಕೀಯ ಒಮ್ಮತ" ಕ್ಕಾಗಿ ಉದ್ದೇಶಿಸಲಾಗಿತ್ತು, ಅದು ಪರಿಣಾಮವಾಗಿ ನೆರವೇರಿತು ಎಂದು ಹೇಳಿದರು.

ಆಪರೇಷನ್ ಸಿಂಧೂರ್ ನ್ನು SCALP ಕ್ಷಿಪಣಿ ಮತ್ತು ಹ್ಯಾಮರ್ ಬಾಂಬ್‌ನಂತಹ ನಿಖರ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಅಥವಾ ಪಿಒಕೆಯಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ 25 ನಿಮಿಷಗಳ ಏಕಕಾಲದಲ್ಲಿ ದಾಳಿ ನಡೆಸಲಾಯಿತು.

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪ್ರತಿದಿನ ಗಡಿಯಾಚೆಗಿನ ಗುಂಡಿನ ದಾಳಿಯನ್ನು ನಡೆಸುತ್ತಿದೆ. ಎಲ್‌ಒಸಿಯಾದ್ಯಂತ ಇರುವ ಉರಿ, ಕುಪ್ವಾರಾ, ಬಾರಾಮುಲ್ಲಾ ಮತ್ತು ಅಖ್ನೂರ್‌ನಂತಹ ವಲಯಗಳನ್ನು ಪಾಕ್ ಸೇನೆ ಗುರಿಯಾಗಿಸಿಕೊಂಡಿರುವುದರಿಂದ ಇಲ್ಲಿಯವರೆಗೆ ಒಬ್ಬ ಸೈನಿಕ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ. ಭಾರತೀಯ ಸೇನೆಯು ಪ್ರಮಾಣಾನುಗುಣ ಪ್ರತಿಕ್ರಿಯೆಯನ್ನು ನೀಡುತ್ತಿದೆ ಎಂದು ಸರ್ಕಾರ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT