ಭಾರತ-ಪಾಕ್ ಸೇನಾ ಸಂಘರ್ಷ (ಸಂಗ್ರಹ ಚಿತ್ರ) 
ದೇಶ

India-Pakistan War: 'ಸೇನಾ ಸಂಘರ್ಷ ಕುರಿತು LIVE ವರದಿ ಮಾಡಬೇಡಿ'; ಮಾಧ್ಯಮಗಳಿಗೆ Indian Army, ಕೇಂದ್ರ ಸರ್ಕಾರ ಮನವಿ

ಸೇನಾ ಚಟುವಟಿಕೆಗಳ ನೇರ ಪ್ರಸಾರದಿಂದಾಗಿ ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುವುದರಿಂದ ಈ ಸೂಚನೆ ನೀಡಲಾಗಿದೆ.

ನವದೆಹಲಿ: ಹಾಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಕುರಿತು ನೇರ ಪ್ರಸಾರ ವರದಿ ಮಾಡಬೇಡಿ ಎಂದು ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ಎಲ್ಲಾ ಮಾಧ್ಯಮ ಚಾನೆಲ್‌ಗಳು, ಡಿಜಿಟಲ್ ವೇದಿಕೆಗಳು ಮತ್ತು ಸುದ್ದಿ ವೃತ್ತಿ ನಿರತರಿಗೆ ಮನವಿ ಮಾಡಿದೆ.

ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, 48 ಗಂಟೆಗಳಿಂದ ಭಾರತ ಮತ್ತು ಪಾಕಿಸ್ತಾನ ನಡುವೆ ನಿರಂತರವಾಗಿ ಸಂಘರ್ಷ ನಡೆಯುತ್ತಿದೆ.

ಪಾಕಿಸ್ತಾನದ ಹಲವು ನಗರಗಳ ಮೇಲೆ ಭಾರತ ವಾಯುದಾಳಿ ಮಾಡಿದ್ದು, ಅಲ್ಲದೆ ಪಾಕಿಸ್ತಾನದ ಉಗ್ರಗಾಮಿಗಳ ನೆಲೆಗಳ ಮೇಲೆ ದಾಳಿ ಮಾಡಿದೆ. ಪಾಕಿಸ್ತಾನದ ನಾಲ್ಕು ಮಹಾನಗರಗಳಲ್ಲಿದ್ದ ಏರ್ ಡಿಫೆನ್ಸ್ ಸಿಸ್ಟಂ ಅನ್ನು ಕೂಡ ಭಾರತ ನಾಶಪಡಿಸಿದ್ದು, ಇದು ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಯುದ್ಧದ ನೇರ ಪ್ರಸಾರ ಬೇಡ: ಸೇನೆ ಮನವಿ

ಇನ್ನು ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಸುದ್ದಿ ವೃತ್ತಿನಿರತ ವ್ಯಕ್ತಿಗಳು ಭಾರತೀಯ ಸೇನಾ ಕಾರ್ಯಾಚರಣೆಗಳ ನೇರ ಪ್ರಸಾರ ಮಾಡದಂತೆ ಸೇನೆ ಮನವಿ ಮಾಡಿದೆ. ಭಾರತೀಯ ಸೇನೆಯ ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಅಥವಾ ನೈಜ-ಸಮಯದ ವರದಿ ಮಾಡುವುದನ್ನು ತಡೆಯುವಂತೆ ಒತ್ತಾಯಿಸಿದೆ.

ಈ ಬಗ್ಗೆ ಕೇಂದ್ರ ರಕ್ಷಣಾ ಇಲಾಖೆ ಸೂಚನೆ ನೀಡಿದ್ದು, ಸೇನಾ ಚಟುವಟಿಕೆಗಳ ನೇರ ಪ್ರಸಾರದಿಂದಾಗಿ ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುವುದರಿಂದ ಈ ಸೂಚನೆ ನೀಡಲಾಗಿದೆ ಎಂದಿದೆ.

ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಅಥವಾ ರಿಯಲ್ ಟೈಮ್ ರಿಪೋರ್ಟ್ ಮಾಡುವುದನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ. ಅಂತಹ ಸೂಕ್ಷ್ಮ ಮಾಹಿತಿಯನ್ನು ಬಹಿರಂಗಪಡಿಸುವುದು ಕಾರ್ಯಾಚರಣೆಯ ಪರಿಣಾಮಕಾರಿತ್ವಕ್ಕೆ ಅಪಾಯ ಉಂಟುಮಾಡಬಹುದು ಮತ್ತು ಸೇನಾ ಸಿಬ್ಬಂದಿ ಜೀವಗಳಿಗೆ ಅಪಾಯವನ್ನು ಉಂಟುಮಾಡಬಹುದು ಎಂದು ರಕ್ಷಣಾ ಇಲಾಖೆ ಹೇಳಿದೆ.

ಇತಿಹಾಸದಲ್ಲೂ ಆಗಿತ್ತು..

ಕಾರ್ಗಿಲ್ ಯುದ್ಧ, 26/11 ದಾಳಿಗಳು ಮತ್ತು ಕಂದಹಾರ್ ಅಪಹರಣದಂತಹ ಹಿಂದಿನ ಘಟನೆಗಳು ನೇರ ಪ್ರಸಾರದ ಅಪಾಯಗಳನ್ನು ಮನವರಿಕೆ ಮಾಡಿಕೊಟ್ಟಿವೆ. ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ತಿದ್ದುಪಡಿ) ನಿಯಮಗಳು, 2021 ರ ಷರತ್ತು 6(1)(p) ಪ್ರಕಾರ, ಭಯೋತ್ಪಾದನಾ-ನಿಗ್ರಹ ಕಾರ್ಯಾಚರಣೆಗಳ ಸಮಯದಲ್ಲಿ ಗೊತ್ತುಪಡಿಸಿದ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಮಾತ್ರ ಪ್ರಸಾರ ಮಾಡಲು ಅನುಮತಿಸಲಾಗಿದೆ. ಎಲ್ಲಾ ಮಾಧ್ಯಮಗಳು ರಾಷ್ಟ್ರದ ಸೇವೆ ಸಂಬಂಧಿತ ಅತ್ಯುನ್ನತ ಮಾನದಂಡಗಳನ್ನು ಎತ್ತಿಹಿಡಿಯುವ ಮೂಲಕ ಕವರೇಜ್‌ನಲ್ಲಿ ಜಾಗರೂಕತೆ, ಸೂಕ್ಷ್ಮತೆ ಮತ್ತು ಜವಾಬ್ದಾರಿಯನ್ನು ಕಾಪಾಡಬೇಕು ಎಂದು ಆಗ್ರಹಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT