ಆಪರೇಷನ್ ಸಿಂಧೂರ  
ದೇಶ

ಆಪರೇಷನ್ ಸಿಂಧೂರ: NDFಗೆ ಒಂದು ತಿಂಗಳ ಸಂಬಳ ದೇಣಿಗೆ ನೀಡಲು ತೆಲಂಗಾಣ ಕಾಂಗ್ರೆಸ್ ಶಾಸಕರು, ಎಂಎಲ್‌ಸಿಗಳು ನಿರ್ಧಾರ

ಇತರ ಪಕ್ಷಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಹ ಒಂದು ತಿಂಗಳ ವೇತನವನ್ನು ದೇಣಿಗೆ ನೀಡುವಂತೆ ಉಪ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೈದರಾಬಾದ್: ಆಪರೇಷನ್ ಸಿಂಧೂರ ಹಿನ್ನೆಲೆಯಲ್ಲಿ ರಾಷ್ಟ್ರೀಯ ರಕ್ಷಣಾ ನಿಧಿಗೆ ಕಾಂಗ್ರೆಸ್ ಶಾಸಕರು ಮತ್ತು ಎಂಎಲ್‌ಸಿಗಳು ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡುವ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವಿಕ್ರಮಾರ್ಕ ಅವರು ಕಾಂಗ್ರೆಸ್ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರೊಂದಿಗೆ ಸಮಾಲೋಚಿಸಿ ದೇಣಿಗೆಯನ್ನು ಘೋಷಿಸಲಿದ್ದಾರೆ ಎಂದು ಅದು ತಿಳಿಸಿದೆ.

ಇತರ ಪಕ್ಷಗಳ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಹ ಒಂದು ತಿಂಗಳ ವೇತನವನ್ನು ದೇಣಿಗೆ ನೀಡುವಂತೆ ಉಪ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ