ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿಯ ಲಗಾಮಾ ಗ್ರಾಮದಲ್ಲಿ ಗಡಿಯಾಚೆಗಿನ ಶೆಲ್ ದಾಳಿಯಿಂದ ಹಾನಿಗೊಳಗಾದ ಅಂಗಡಿಗಳ ಅವಶೇಷಗಳನ್ನು ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿರುವುದು  
ದೇಶ

ಇಡೀ ಪಶ್ಚಿಮ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಯನ್ನು ಬಲವಾಗಿ ಹಿಮ್ಮೆಟ್ಟಿಸಲಾಗಿದೆ: ಸೇನೆ

ಎಲ್ಲಾ ದುಷ್ಟ ಉದ್ದೇಶಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುವುದು ಎಂದು ಪ್ರತಿಪಾದಿಸುವ ಸಣ್ಣ ವೀಡಿಯೊ ಕ್ಲಿಪ್ ನ್ನು ಸಹ ಪೋಸ್ಟ್‌ನೊಂದಿಗೆ ಹಂಚಿಕೊಂಡಿದೆ.

ಜಮ್ಮು: ಪಾಕಿಸ್ತಾನದ ಸಶಸ್ತ್ರ ಪಡೆಗಳು ನಿನ್ನೆ ಮತ್ತು ಇಂದು ಶುಕ್ರವಾರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದ್ದು ಅವುಗಳನ್ನು 'ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ' ಎಂದು ಭಾರತೀಯ ಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನಿ ಪಡೆಗಳು 'ಹಲವಾರು ಕದನ ವಿರಾಮ ಉಲ್ಲಂಘನೆ'ಗಳನ್ನು ನಡೆಸಿವೆ ಎಂದು ಭಾರತೀಯ ಸೇನೆಯು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ.

ಎಲ್ಲಾ ದುಷ್ಟ ಉದ್ದೇಶಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುವುದು ಎಂದು ಪ್ರತಿಪಾದಿಸುವ ಸಣ್ಣ ವೀಡಿಯೊ ಕ್ಲಿಪ್ ನ್ನು ಸಹ ಪೋಸ್ಟ್‌ನೊಂದಿಗೆ ಹಂಚಿಕೊಂಡಿದೆ.

'ಆಪರೇಷನ್ ಸಿಂದೂರ್ - ಪಾಕಿಸ್ತಾನ ಸಶಸ್ತ್ರ ಪಡೆಗಳು 2025 ರ ಮೇ 08 ಮತ್ತು 09 ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ಸಹ ನಡೆಸಿವೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಡ್ರೋನ್ ದಾಳಿಗಳನ್ನು 'ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಯಿತು. ಕದನ ವಿರಾಮ ಉಲ್ಲಂಘನೆಗಳಿಗೆ 'ಸೂಕ್ತ ಉತ್ತರ ನೀಡಲಾಯಿತು ಎಂದು ಭಾರತೀಯ ಸೇನೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!