ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಭಾರತ-ಪಾಕ್ ಸಂಘರ್ಷದ ನಡುವೆ ಇಬ್ಬರು ಶಂಕಿತ JMB ಉಗ್ರರ ಬಂಧನ

ಬಂಧಿತರು ಭಯೋತ್ಪಾದಕ ಸಂಘಟನೆ ಸೇರಲು ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ಪ್ರೇರೇಪಿಸುವಲ್ಲಿ ತೊಡಗಿದ್ದರು ಮತ್ತು ಅವರನ್ನು ಭಾರತದ ವಿರುದ್ಧ ಯುದ್ಧ ಮಾಡುವ ಉದ್ದೇಶದೊಂದಿಗೆ ಮೂಲಭೂತೀಕರಣ ಮಾಡಲಾಗುತಿತ್ತು ಎಂದು ಅವರು ತಿಳಿಸಿದ್ದಾರೆ.

ಕೊಲ್ಕತ್ತ: ನಿಷೇಧಿತ ಜಮಾತುಲ್ಲಾ ಮುಜಾ ಹಿದ್ದೀನ್ ಬಾಂಗ್ಲಾದೇಶ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಬೀರ್ ಭೂಮ್ ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳ ವಿಶೇಷ ಕಾರ್ಯ ಪಡೆ ಪೊಲೀಸರು ಬಂಧಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬಂಧಿತರನ್ನು ಅಜ್ಮೋಲ್ ಹೊಸೈನ್ ಮತ್ತು ಸಾಹೇಬ್ ಅಲಿ ಖಾನ್ ಎಂದು ಗುರುತಿಸಲಾಗಿದೆ. ಅವರನ್ನು ಮೇ 8 ಮತ್ತು 9 ರ ಮಧ್ಯರಾತ್ರಿ ನಲ್ಹಾಟಿ ಮತ್ತು ಮುರಾರೈ ಪ್ರದೇಶಗಳಿಂದ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಬಂಧಿತರು ಭಯೋತ್ಪಾದಕ ಸಂಘಟನೆ ಸೇರಲು ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ಪ್ರೇರೇಪಿಸುವಲ್ಲಿ ತೊಡಗಿದ್ದರು ಮತ್ತು ಅವರನ್ನು ಭಾರತದ ವಿರುದ್ಧ ಯುದ್ಧ ಮಾಡುವ ಉದ್ದೇಶದೊಂದಿಗೆ ಮೂಲಭೂತೀಕರಣ ಮಾಡಲಾಗುತಿತ್ತು ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ ಜಿಹಾದಿ ಚಟುವಟಿಕೆಗಳನ್ನು ನಡೆಸಲು ಬಾಂಗ್ಲಾದೇಶ ದಾಟಲು ಯತ್ನಿಸಿದ್ದ ಹೊಸೈನ್ ಉಪಖಂಡದ ಇತರ ಭಾಗಗಳಲ್ಲಿ ಸಂಪರ್ಕ ಹೊಂದಿದ್ದಾನೆ. ಇವರಿಬ್ಬರು ಇತರ ಸಹಚರರೊಂದಿಗೆ ವಿಧ್ವಂಸಕ ಚಟುವಟಿಕೆಗಳಿಗಾಗಿ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಸಂಗ್ರಹಿಸಲು ಪ್ರಯತ್ನಿಸಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

ಬಂಧಿತರನ್ನು ರಾಮ್‌ಪುರಹಟ್‌ನ ಸಹಾಯಕ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ (ACJM) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!