ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ 
ದೇಶ

ಕದನ ವಿರಾಮ ಉಲ್ಲಂಘನೆ: ಇದಕ್ಕೆ ಪಾಕಿಸ್ತಾನವೇ ಸಂಪೂರ್ಣ ಹೊಣೆ- ವಿಕ್ರಮ್ ಮಿಸ್ರಿ

ಪಾಕಿಸ್ತಾನದ ದಾಳಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ಭಾರತೀಯ ಸೇನೆಯೂ ಸಮರ್ಥವಾಗಿ ಪ್ರತ್ಯುತ್ತರ ನೀಡಿದೆ.

ನವದೆಹಲಿ: ಕದನ ವಿರಾಮ ಒಪ್ಪಂದ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಒಪ್ಪಂದ ಉಲ್ಲಂಘಿಸಿದ ಪಾಕಿಸ್ತಾನವೇ ಇದಕ್ಕೆ ಸಂಪೂರ್ಣ ಜವಾಬ್ದಾರಿಯಾಗಿದ್ದು, ನಮ್ಮ ಸೇನೆಯೂ ಪ್ರತ್ಯುತ್ತರ ನೀಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಿಕ್ರಮ್ ಮಿಸ್ತಿ ತಿಳಿಸಿದ್ದಾರೆ

ಕದನ ವಿರಾಮ ಉಲ್ಲಂಘನೆ ವರದಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯನ್ನು ತಡೆಯಲು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವೆ ಇಂದು ಮಧ್ಯಾಹ್ನ ನಡೆದ ಮಾತುಕತೆ ಬಳಿಕ ಕದನ ವಿರಾಮ ಒಪ್ಪಂದಕ್ಕೆ ಎರಡೂ ರಾಷ್ಟ್ರಕ್ಕೆ ಸಮ್ಮತಿ ನೀಡಿದ್ದವು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಮತ್ತೆ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದೆ. ಇದು ಅತ್ಯಂತ ಖಂಡನೀಯವಾಗಿದೆ. ಇದಕ್ಕೆ ಪಾಕಿಸ್ತಾನವೇ ಹೊಣೆ ಎಂದರು.

ಪಾಕಿಸ್ತಾನದ ದಾಳಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದು, ಭಾರತೀಯ ಸೇನೆಯೂ ಸಮರ್ಥವಾಗಿ ಪ್ರತ್ಯುತ್ತರ ನೀಡಿದೆ. ಈ ಸೂಕ್ಷ್ಮ ವಿಚಾರವನ್ನು ಪಾಕಿಸ್ತಾನ ಅರ್ಥ ಮಾಡಿಕೊಳ್ಳಬೇಕಾಗಿದ್ದು, ಇದನ್ನು ತಡೆಯಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ ಕೆಲವೇ ಗಂಟೆಗಳಲ್ಲಿ ಪಾಕಿಸ್ತಾನ ಮತ್ತೊಮ್ಮೆ ಭಾರತಕ್ಕೆ ದ್ರೋಹ ಬಗೆದು ಕದನ ವಿರಾಮವನ್ನು ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ಡ್ರೋನ್ ಗಳು ಕಾಣಿಸಿದ ನಂತರ ರಾಜಸ್ಥಾನದ ಜೈಸಲ್ಮೇರ್, ಬಾರ್ಮರ್, ಗುಜರಾತಿನ ಕಚ್ ಮತ್ತಿತರ ಅನೇಕ ಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡ್ರೋನ್ ಹಾರಾಟದ ದೃಶ್ಯಗಳು ಕಂಡುಬಂದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!