ಸಾಂದರ್ಭಿಕ ಚಿತ್ರ  
ದೇಶ

ಸಂಘರ್ಷ ತಗ್ಗಿಸಿ: ಭಾರತ-ಪಾಕಿಸ್ತಾನಕ್ಕೆ G7 ರಾಷ್ಟ್ರಗಳ ಕರೆ; ಮಾತುಕತೆಗೆ ಸಹಾಯಕ್ಕೆ ಅಮೆರಿಕಾ ಮುಂದು

ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ತ್ವರಿತ ಮತ್ತು ಶಾಶ್ವತ ರಾಜತಾಂತ್ರಿಕ ಪರಿಹಾರಕ್ಕಾಗಿ ನಮ್ಮ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ಜಿ7 ಹೇಳಿದೆ.

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಈ ಯುದ್ಧದ ಸಮಯದಲ್ಲಿ ಗರಿಷ್ಠ ಸಂಯಮವನ್ನು ಕಾಯ್ದುಕೊಳ್ಳುವಂತೆ ಏಳು ರಾಷ್ಟ್ರಗಳ ಗುಂಪು (G7) ಒತ್ತಾಯಿಸಿವೆ. ಮಾತುಕತೆಯ ಮೂಲಕ ತಮ್ಮ ಮಿಲಿಟರಿ ಸಂಘರ್ಷದ ಉಲ್ಬಣವನ್ನು ತಕ್ಷಣವೇ ಕಡಿಮೆ ಮಾಡಬೇಕೆಂದು ಕರೆ ನೀಡಿವೆ.

ಪರಮಾಣು ಶಸ್ತ್ರಸಜ್ಜಿತ ನೆರೆಹೊರೆ ದೇಶಗಳ ನಡುವಿನ ಮಿಲಿಟರಿ ಮುಖಾಮುಖಿ ನಿರಂತರವಾಗಿ ಉಲ್ಬಣಗೊಳ್ಳುತ್ತಿರುವ ಮಧ್ಯೆ ಜಿ7 ಪ್ರಬಲ ಗುಂಪಿನಿಂದ ಈ ಕರೆ ಬಂದಿದೆ.

ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ತ್ವರಿತ ಮತ್ತು ಶಾಶ್ವತ ರಾಜತಾಂತ್ರಿಕ ಪರಿಹಾರಕ್ಕಾಗಿ ನಮ್ಮ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ಜಿ7 ಹೇಳಿದೆ. ಮತ್ತಷ್ಟು ಮಿಲಿಟರಿ ಉಲ್ಬಣವು ಪ್ರಾದೇಶಿಕ ಸ್ಥಿರತೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ ಎಂದು ಜಿ7 ದೇಶಗಳ ವಿದೇಶಾಂಗ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾವು, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುಕೆ ಮತ್ತು ಯುಎಸ್‌ನ ಜಿ7 ವಿದೇಶಾಂಗ ಮಂತ್ರಿಗಳು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಪ್ರತಿನಿಧಿಗಳು ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಭಾರತ ಮತ್ತು ಪಾಕಿಸ್ತಾನ ಎರಡೂ ಕಡೆಯಿಂದ ಗರಿಷ್ಠ ಸಂಯಮವನ್ನು ಕೋರುತ್ತೇವೆ ಎಂದು ಗುಂಪು ಹೇಳಿಕೆಯಲ್ಲಿ ತಿಳಿಸಿದೆ.

ಮತ್ತಷ್ಟು ಮಿಲಿಟರಿ ಉಲ್ಬಣವು ಪ್ರಾದೇಶಿಕ ಸ್ಥಿರತೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಎರಡೂ ಕಡೆಯ ನಾಗರಿಕರ ಸುರಕ್ಷತೆಯ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ ಎಂದು ಅದು ಹೇಳಿದೆ.

ಪಾಕ್ ಸೇನಾ ಮುಖ್ಯಸ್ಥರಿಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಕರೆ

ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಪಾಕಿಸ್ತಾನಿ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಭವಿಷ್ಯದ ಘರ್ಷಣೆಗಳನ್ನು ತಪ್ಪಿಸಲು ಭಾರತದೊಂದಿಗೆ ರಚನಾತ್ಮಕ ಮಾತುಕತೆಗಳನ್ನು ಪ್ರಾರಂಭಿಸುವಲ್ಲಿ ಅಮೆರಿಕ ಸಹಾಯಹಸ್ತ ನೀಡಲು ಮುಂದಾಗಿದೆ.

ರುಬಿಯೊ ಅವರು ಎರಡೂ ದೇಶಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮಾರ್ಗಗಳನ್ನು ಕಂಡುಕೊಳ್ಳುವಂತೆ ಒತ್ತಾಯಿಸುತ್ತಲೇ ಇದ್ದಾರೆ ಎಂದು ವಕ್ತಾರ ಟ್ಯಾಮಿ ಬ್ರೂಸ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. "ಭವಿಷ್ಯದ ಘರ್ಷಣೆಗಳನ್ನು ತಪ್ಪಿಸಲು ರಚನಾತ್ಮಕ ಮಾತುಕತೆಗಳನ್ನು ಪ್ರಾರಂಭಿಸುವಲ್ಲಿ ಅಮೆರಿಕ ಸಹಾಯ ಮಾಡುತ್ತದೆ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್‌ವರೆಗೆ ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಡ್ರೋನ್ ದಾಳಿಯ ಹೊಸ ಅಲೆಯನ್ನು ಪ್ರಾರಂಭಿಸಿತು, ವಿಮಾನ ನಿಲ್ದಾಣಗಳು ಮತ್ತು ವಾಯುನೆಲೆಗಳು ಸೇರಿದಂತೆ ಪ್ರಮುಖ ಸ್ಥಾಪನೆಗಳನ್ನು ಹೊಡೆಯುವ ಶತ್ರುಗಳ ಪ್ರಯತ್ನಗಳನ್ನು ಯಶಸ್ವಿಯಾಗಿ ವಿಫಲಗೊಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ, Muslim ಶಾಸಕರ ಮನವೊಲಿಕೆಗೂ ಜಗ್ಗದ ಸಾದಿಕ್ ಪೈಲ್ವಾನ್!

Iran war: ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಸಭೆ, ಸಿದ್ದರಾಮಯ್ಯ ಭಾಗವಹಿಸುತ್ತಾರಾ?

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಕಲಬುರಗಿ: ನಡುರಸ್ತೆಯಲ್ಲೇ ಪತ್ನಿ ಕತ್ತು ಕೊಯ್ದು ಹತ್ಯೆ; ಶವದ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಪತಿಯ ಬಂಧನ

SCROLL FOR NEXT