ವಿದೇಶಾಂಗ ಇಲಾಖೆಯಿಂದ ಸುದ್ದಿಗೋಷ್ಠಿ  
ದೇಶ

ಭಾರತದ ನಾಲ್ಕು ವಾಯು ನೆಲೆಗಳ ಮೇಲೆ ಪಾಕಿಸ್ತಾನ ದಾಳಿ; ಹೈಸ್ಪೀಡ್ ಕ್ಷಿಪಣಿ ಬಳಕೆ: ಸುದ್ದಿಗೋಷ್ಠಿಯಲ್ಲಿ ಕರ್ನಲ್ ಸೋಫಿಯಾ ಖುರೇಷಿ

ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು, ಯುದ್ಧಸಾಮಗ್ರಿಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿದೆ. ಭಾರತ ಅನೇಕ ಅಪಾಯಗಳನ್ನು ತಟಸ್ಥಗೊಳಿಸಿತು.

ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ನಂತರ ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆಯುತ್ತಿದೆ. ಈ ಬಗ್ಗೆ ಇಂದು ಮತ್ತೆ ಮಹಿಳಾ ಸೇನಾಧಿಕಾರಿಗಳು ವಿದೇಶಾಂಗ ಇಲಾಖೆ ಕಾರ್ಯದರ್ಶಿಗಳಾದ ವಿಕ್ರಮ್ ಮಿಸ್ರಿ ಅವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನಿ ಸೇನೆಯು ಪಶ್ಚಿಮ ಗಡಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದೆ; ಅದು ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು, ಯುದ್ಧಸಾಮಗ್ರಿಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿದೆ. ಭಾರತ ಅನೇಕ ಅಪಾಯಗಳನ್ನು ತಟಸ್ಥಗೊಳಿಸಿತು.

ಪಾಕಿಸ್ತಾನವು 26ಕ್ಕೂ ಹೆಚ್ಚು ಸ್ಥಳಗಳಲ್ಲಿ ವಾಯುದಳದ ಮೂಲಕ ನುಸುಳಲು ಪ್ರಯತ್ನಿಸಿತು. ಉಧಮ್‌ಪುರ, ಭುಜ್, ಪಠಾಣ್‌ಕೋಟ್, ಬಟಿಂಡಾದಲ್ಲಿನ ವಾಯುಪಡೆಯ ನೆಲೆಗಳಲ್ಲಿ ನಮ್ಮ ಸೇನಾಉಪಕರಣಗಳು ಹಾನಿಗೊಳಿಸಿ ಸಿಬ್ಬಂದಿಗೆ ತೊಂದರೆ ನೀಡಿದ್ದಾರೆ. ಪಂಜಾಬ್‌ನ ವಾಯುನೆಲೆಯನ್ನು ಗುರಿಯಾಗಿಸಲು ಬೆಳಗಿನ ಜಾವ 1:40 ಕ್ಕೆ ಹೈಸ್ಪೀಡ್ ಕ್ಷಿಪಣಿಗಳನ್ನು ಬಳಸಿದರು. ಜಮ್ಮು-ಕಾಶ್ಮೀರದ ಆರೋಗ್ಯ ಸೌಲಭ್ಯಗಳು ಮತ್ತು ಶಾಲೆಗಳ ಮೇಲೂ ದಾಳಿ ಮಾಡಿದ್ದಾರೆ, ಉಧಮ್‌ಪುರ, ಪಠಾಣ್‌ಕೋಟ್, ಅಧಮ್‌ಪುರ ಮತ್ತು ನಲಿಯಾದಲ್ಲಿನ ವಾಯುನೆಲೆಗಳು ದಾಳಿಯ ಗುರಿಗಳಲ್ಲಿ ಸೇರಿವೆ ಎಂದು ಕರ್ನಲ್ ಸೋಫಿಯಾ ಖುರೇಷಿ ತಿಳಿಸಿದ್ದಾರೆ.

26 ಸ್ಥಳಗಳಲ್ಲಿ ಒಳನುಸುಳಲು ಪ್ರಯತ್ನಿಸಲು ಪಾಕಿಸ್ತಾನ ಸುಮಾರು 300 ರಿಂದ 400 ಡ್ರೋನ್‌ಗಳನ್ನು ಬಳಸಿದೆ. ಡ್ರೋನ್‌ಗಳ ಅವಶೇಷಗಳ ವಿಧಿವಿಜ್ಞಾನ ತನಿಖೆ ನಡೆಸಲಾಗುತ್ತಿದೆ. ಆರಂಭಿಕ ವರದಿಗಳು ಅವು ಟರ್ಕಿಶ್ ಆಸಿಸ್‌ಗಾರ್ಡ್ ಸೊಂಗಾರ್ ಡ್ರೋನ್‌ಗಳು ಎಂದು ಸೂಚಿಸುತ್ತವೆ ಎಂದರು.

ಪಾಕಿಸ್ತಾನವು ಶ್ರೀನಗರ, ಅವಂತಿಪುರ ಮತ್ತು ಉಧಂಪುರ್ ವಾಯುನೆಲೆಗಳಲ್ಲಿರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿಕೊಂಡಿದೆ. ಇದು ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವ ಪಾಕಿಸ್ತಾನದ ಬೇಜವಾಬ್ದಾರಿ ಪ್ರವೃತ್ತಿಯನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು.

ಪಾಕಿಸ್ತಾನ ಸೇನೆಯು ಮುಂದಕ್ಕೆ ಬರುತ್ತಿದ್ದು, ಇದು ಪ್ರಚೋದನಕಾರಿ ಕ್ರಮವಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಎದುರಿಸಲು ಸಜ್ಜಾಗಿದೆ ಎಂದರು.

ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾತನಾಡಿ, ಪಾಕಿಸ್ತಾನದ ಕ್ರಮಗಳು ಪ್ರಚೋದನೆ ಮತ್ತು ಉಲ್ಬಣಕ್ಕೆ ಕಾರಣವಾಗಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಪಾಕಿಸ್ತಾನದ ಕಡೆಯಿಂದ ಈ ಪ್ರಚೋದನೆ ಮತ್ತು ಉಲ್ಬಣಗಳಿಗೆ ಜವಾಬ್ದಾರಿಯುತ ಪ್ರತಿಕ್ರಿಯೆ ನೀಡಿದೆ. ಇಂದು ಬೆಳಗ್ಗೆ, ಈ ಉಲ್ಬಣ ಮತ್ತು ಪ್ರಚೋದನಕಾರಿ ಮಾದರಿಯ ಪುನರಾವರ್ತನೆಯನ್ನು ನಾವು ನೋಡಿದ್ದೇವೆ ಎಂದರು.

ಈ ಮಧ್ಯೆ, ಅಂತಾರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಕ್ರಿಯೆಯಾಗಿ, ಜಮ್ಮುವಿನ ಅಖ್ನೂರ್ ಎದುರಿನ ಭಯೋತ್ಪಾದಕ ಲಾಂಚ್‌ಪ್ಯಾಡ್ ನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ ಎಂದು ಬಿಎಸ್‌ಎಫ್ ಹೇಳಿದೆ. ಪಾಕಿಸ್ತಾನದ ಸಿಯಾಲ್‌ಕೋಟ್ ಜಿಲ್ಲೆಯ ಲೂನಿಯಲ್ಲಿ ಈ ನೆಲೆ ಇತ್ತು ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT