ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ 
ದೇಶ

ಸದ್ಯಕ್ಕೆ ಕದನ ವಿರಾಮ: ಭಯೋತ್ಪಾದನೆ ವಿರುದ್ಧ ಭಾರತದ ನಿಲುವು ಬದಲಾಗಲ್ಲ; ಪಾಕ್ ಗೆ ಜೈಶಂಕರ್ ಎಚ್ಚರಿಕೆ

ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ.

ನವದೆಹಲಿ: ಮೂರು ದಿನಗಳಿಂದ ನಡೆಯುತ್ತಿದ್ದ ಭಾರತ- ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ. ಆದರೆ ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿನಲ್ಲಿ ಯಾವುದೇ ರಾಜಿ ಇಲ್ಲ. ಅದು ಮುಂದುವರೆಯುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಹೇಳಿದ್ದಾರೆ..

ಕದನ ವಿರಾಮ ಒಪ್ಪಂದದ ನಂತರ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೈಶಂಕರ್, ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸುವ ಕುರಿತು ಪರಸ್ಪರ ಒಮ್ಮತಕ್ಕೆ ಬಂದಿವೆ.

ಆದರೆ, ಭಾರತ ಯಾವುದೇ ಮಾದರಿಯ ಭಯೋತ್ಪಾದನೆ ಮತ್ತು ಸೂಚನೆಗಳ ವಿರುದ್ಧ ರಾಜಿಯಾಗದ ನಿಲುವನ್ನು ಸ್ಥಿರವಾಗಿ ನಿರ್ವಹಿಸುತ್ತಿದೆ. ಅದು ಮುಂದುವರಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನಗಳು 'ಸಂಪೂರ್ಣ ಮತ್ತು ತಕ್ಷಣದ' ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್!

ಪ್ರವಾಹದಿಂದಾಗಿ ಮಣಿಮಹೇಶ್ ಯಾತ್ರೆಯ 16 ಭಕ್ತರು ಸಾವು: ಹಿಮಾಚಲ ವಿಪತ್ತು ಪೀಡಿತ ರಾಜ್ಯ; ಸಿಎಂ ಸುಖು ಘೋಷಣೆ!

Kiccha47 Title: Max ಆಯ್ತು, ಈಗ ಸುದೀಪ್ Mark ಅವತಾರ!

ಪಂಚಶೀಲ ಒಪ್ಪಂದಗಳ ಹಾದಿಯಲ್ಲಿ ಸಾಗಿಬಂದ ಭಾರತ – ಚೀನಾ ಸಂಬಂಧಗಳತ್ತ ಒಂದು ನೋಟ (ಜಾಗತಿಕ ಜಗಲಿ)

SCROLL FOR NEXT