ಪಾಕಿಸ್ತಾನದ ಗಡಿಯಾಚೆಗಿನ ಗುಂಡಿನ ದಾಳಿಯ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.  
ದೇಶ

ಪಾಕ್ ಸೈನ್ಯ ಹಿಮ್ಮೆಟ್ಟಿಸಲು ಸನ್ನದ್ಧ; S-400, ಸೂರತ್ ವಾಯುನೆಲೆ ಧ್ವಂಸ ಸುದ್ದಿ ಸುಳ್ಳು: ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್

ಪಾಕಿಸ್ತಾನವು ನಿರಂತರ ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಹರಡುತ್ತಿದೆ, ಭಾರತೀಯ ಎಸ್-400 ವ್ಯವಸ್ಥೆಯನ್ನು ನಾಶಪಡಿಸಲಾಗಿದೆ, ಸೂರತ್‌ಗಢ ಮತ್ತು ಸಿರ್ಸಾದಲ್ಲಿನ ವಾಯುನೆಲೆಗಳನ್ನು ನಾಶಪಡಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಗಳು ಸುಳ್ಳು ಎಂದರು.

ನವದೆಹಲಿ: ಪಾಕಿಸ್ತಾನವು ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಈ ಯುದ್ಧದ ಸಮಯದಲ್ಲಿ ಹಬ್ಬಿಸುತ್ತಿದೆ ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದ್ದಾರೆ, ಇಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿಗಳೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸೂರತ್‌ನಲ್ಲಿ ಭಾರತದ ಎಸ್-400 ವ್ಯವಸ್ಥೆ ಮತ್ತು ವಾಯುನೆಲೆಗಳನ್ನು ನಾಶಪಡಿಸಿದ ಪಾಕಿಸ್ತಾನದ ಹೇಳಿಕೆ ಸುಳ್ಳು ಎಂದಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳು ಗುರುತಿಸಲಾದ ಮಿಲಿಟರಿ ಗುರಿಗಳ ಮೇಲೆ ಮಾತ್ರ ನಿಖರವಾದ ದಾಳಿ ನಡೆಸಿವೆ. ಪಾಕಿಸ್ತಾನವು ನಿರಂತರ ದುರುದ್ದೇಶಪೂರಿತ ತಪ್ಪು ಮಾಹಿತಿಯನ್ನು ಹರಡುತ್ತಿದೆ, ಭಾರತೀಯ ಎಸ್-400 ವ್ಯವಸ್ಥೆಯನ್ನು ನಾಶಪಡಿಸಲಾಗಿದೆ, ಸೂರತ್‌ಗಢ ಮತ್ತು ಸಿರ್ಸಾದಲ್ಲಿನ ವಾಯುನೆಲೆಗಳನ್ನು ನಾಶಪಡಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಗಳು ಸುಳ್ಳು ಎಂದರು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಇದನ್ನು ದೃಢಪಡಿಸಿದರು, ಪಾಕಿಸ್ತಾನವು ಸುಳ್ಳು, ತಪ್ಪು ಸುದ್ದಿಯನ್ನು ಹರಡುತ್ತಿದೆ ಎಂದರು. ಪಾಕಿಸ್ತಾನ ಕೈಗೊಂಡ ಚಟುವಟಿಕೆಗಳ ಬಗ್ಗೆ ಪಾಕಿಸ್ತಾನದ ಹೇಳಿಕೆಗಳು ಸುಳ್ಳು, ತಪ್ಪು ಮಾಹಿತಿ ಮತ್ತು ಪ್ರಚಾರದಿಂದ ತುಂಬಿವೆ. ಪಾಕಿಸ್ತಾನ ಸರ್ಕಾರದ ಬೆಂಬಲಿತ ಸಂಸ್ಥೆಗಳು ಕೂಡ ಇದಕ್ಕೆ ಪ್ರೋತ್ಸಾಹ ನೀಡುತ್ತಿವೆ. ದೇಶದಲ್ಲಿನ ವಿವಿಧ ಮಿಲಿಟರಿ ಸ್ಥಾಪನೆಗಳ ಮೇಲೆ ದಾಳಿ ಮಾಡಿ ನಾಶಪಡಿಸುವ ಬಗ್ಗೆ ಅವರು ಮಾಡಿರುವ ಹೇಳಿಕೆಗಳು ಸಂಪೂರ್ಣವಾಗಿ ಸುಳ್ಳು ಎಂದರು.

ಸೂರತ್‌ಗಢದ ಸಿರ್ಸಾದಲ್ಲಿರುವ ವಾಯುಪಡೆಯ ನೆಲೆಗಳು ನಾಶವಾಗಿವೆ ಎಂಬ ಹೇಳಿಕೆ, ಅದಮ್‌ಪುರದಲ್ಲಿರುವ ಎಸ್-400 ನೆಲೆ ನಾಶವಾಗಿದೆ ಎಂಬ ಹೇಳಿಕೆ ಶುದ್ಧ ಸುಳ್ಳು ಎಂದರು.

ಭಾರತೀಯ ಸಶಸ್ತ್ರ ಪಡೆಗಳು ಹೆಚ್ಚಿನ ಕಾರ್ಯಾಚರಣೆಯ ಸನ್ನದ್ಧ ಸ್ಥಿತಿಯಲ್ಲಿವೆ, ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಎದುರಿಸಿವೆ. ಪಾಕಿಸ್ತಾನದ ಕಡೆಯಿಂದ ಬರುವ ಪ್ರಚೋದನೆಗೆ ಭಾರತೀಯ ಸಶಸ್ತ್ರ ಪಡೆಗಳು ಉಲ್ಬಣಗೊಳ್ಳದಿರಲು ಬದ್ಧವಾಗಿವೆ ಎಂದರು.

ಭಾರತವು ಪಾಕಿಸ್ತಾನದ ಸೇನಾ ನೆಲೆಗಳನ್ನು ಪ್ರತೀಕಾರದ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ

ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಭಾರತವು ಪಾಕಿಸ್ತಾನದ ಸೇನಾ ನೆಲೆಗಳನ್ನು ಪ್ರತೀಕಾರದ ದಾಳಿಯಲ್ಲಿ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನವು ಉದ್ದೇಶಪೂರ್ವಕವಾಗಿ ವಾಯುನೆಲೆಗಳನ್ನು ಗುರಿಯಾಗಿಸಿಕೊಂಡ ನಂತರ, ಭಾರತೀಯ ಸಶಸ್ತ್ರ ಪಡೆಗಳು ತ್ವರಿತ ಮತ್ತು ಯೋಜಿತ ಪ್ರತೀಕಾರದ ಕ್ರಮ ಕೈಗೊಂಡವು. ತಾಂತ್ರಿಕ ಸ್ಥಾಪನೆಗಳು, ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು, ರಾಡಾರ್ ತಾಣಗಳು ಮತ್ತು ಶಸ್ತ್ರಾಸ್ತ್ರ ಕೇಂದ್ರಗಳನ್ನು ಗುರಿಯಾಗಿಸಿಕೊಂಡಿವೆ.

"ರಫೀಕಿ, ಮುರಿಯದ್, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್‌ನಲ್ಲಿರುವ ಪಾಕಿಸ್ತಾನಿ ಸೇನಾ ನೆಲೆಗಳನ್ನು ವಾಯು ಉಡಾವಣೆ, ನಿಖರ ಮದ್ದುಗುಂಡುಗಳು ಮತ್ತು ಫೈಟರ್ ಜೆಟ್‌ಗಳ ಮೂಲಕ ಗುರಿಯಾಗಿಸಿಕೊಂಡವು. ಪಸ್ರೂರ್‌ನಲ್ಲಿರುವ ರಾಡಾರ್ ತಾಣ ಮತ್ತು ಸಿಯಾಲ್‌ಕೋಟ್‌ನಲ್ಲಿರುವ ವಾಯುಯಾನ ನೆಲೆಯನ್ನು ಸಹ ನಿಖರ ಮದ್ದುಗುಂಡುಗಳಿಂದ ಗುರಿಯಾಗಿಸಲಾಯಿತು ಎಂದರು.

ರಾಜೌರಿಯಲ್ಲಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಒಬ್ಬ ಅಧಿಕಾರಿ ಸಾವು

ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಿಂದಾಗಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ದೃಢಪಡಿಸಿದ್ದಾರೆ.

ಇಂದು ಮುಂಜಾನೆ ರಾಜೌರಿಯಲ್ಲಿ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಟಿಎನ್‌ಐಇ ಹಿಂದಿನ ದಿನ ವರದಿ ಮಾಡಿತ್ತು.

ಶೆಲ್ ದಾಳಿ ಥಾಪ್ಪಾ ಅವರ ಮನೆಗೆ ಬಡಿದ ನಂತರ ಅವರಿಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಮೃತಪಟ್ಟರು, ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT