ನರೇಂದ್ರ ಮೋದಿ 
ದೇಶ

ಪಾಕ್‌ನ ಅಣ್ವಸ್ತ್ರ ದಾಳಿ ಬೆದರಿಕೆ ನಮ್ಮ ಮುಂದೆ ನಡೆಯಲ್ಲ; ಇದು ಯುದ್ಧದ ಯುಗವಲ್ಲ, ಹಾಗಂತ ಉಗ್ರರ ಯುಗವೂ ಅಲ್ಲ: PM Modi

ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ ಇರುತ್ತದೆ. ಭಾರತದ ನಿಲುವು ಸ್ಪಷ್ಟವಾಗಿದೆ.

ನವದೆಹಲಿ: ಇದು ಯುದ್ಧದ ಯುಗವಲ್ಲ, ಹಾಗಂತ ಭಯೋತ್ಪಾದನೆಯ ಯುಗವೂ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಆಪರೇಷನ್ ಸಿಂಧೂರ್ ಯಶಸ್ವಿ ಬೆನ್ನಲ್ಲೇ ದೇಶದ ಜನತೆಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಬಗ್ಗೆ ಮಾತ್ರ ಇರುತ್ತದೆ. ಭಾರತದ ನಿಲುವು ಸ್ಪಷ್ಟವಾಗಿದೆ. ಭಯೋತ್ಪಾದನೆ, ವ್ಯಾಪಾರ ಮತ್ತು ಮಾತುಕತೆಗಳನ್ನು ಒಟ್ಟಿಗೆ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಉನ್ನತ ಅಧಿಕಾರಿಗಳು ಭಾಗವಹಿಸಿರುವುದು ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದು ಸ್ಪಷ್ಟವಾಗಿದೆ. ಉಗ್ರರ ಅಂತ್ಯಕ್ರಿಯೆಯಲ್ಲಿ ಸೇನೆಯ ಉನ್ನತ ಅಧಿಕಾರಿಗಳು ಭಾಗಿಯಾಗಿರುವ ಪಾಕಿಸ್ತಾನದ ಆ ಕೊಳಕು ಸತ್ಯವನ್ನು ಜಗತ್ತು ನೋಡಿದೆ. ಪಾಕ್ ಪ್ರಾಯೋಜಿತ ಭಯೋತ್ಪಾದನೆಗೆ ಇದಕ್ಕಿಂತ ದೊಡ್ಡ ಪುರಾವೆ ಇನ್ನೊಂದಿಲ್ಲ ಎಂದು ಮೋದಿ ಹೇಳಿದರು.

ಪಾಕಿಸ್ತಾನ ಮಿಲಿಟರಿ ಮತ್ತು ಸರ್ಕಾರ ಅಲ್ಲಿ ಭಯೋತ್ಪಾದನೆ ಬೆಳೆಯಲು ಸಹಾಯ ಮಾಡುತ್ತಿರುವ ರೀತಿ, ಅದು ಒಂದು ದಿನ ಪಾಕಿಸ್ತಾನವನ್ನು ಕೊನೆಗೊಳಿಸುತ್ತದೆ. ಪಾಕಿಸ್ತಾನ ಉಳಿಯಬೇಕಾದರೆ, ಅದು ಭಯೋತ್ಪಾದಕ ಮೂಲಸೌಕರ್ಯವನ್ನು ಕೊನೆಗೊಳಿಸಬೇಕು ಎಂದರು. ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳ ಮೇಲಿನ ಕಾರ್ಯಾಚರಣೆಯನ್ನು ಭಾರತ ಸದ್ಯಕ್ಕೆ ನಿಲ್ಲಿಸಿದೆ ಹೊರತು ನಿಂತಿಲ್ಲ. ನೆರೆಯ ರಾಷ್ಟ್ರದ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ಸದ್ಯಕ್ಕೆ ಪಾಕಿಸ್ತಾನದ ಭಯೋತ್ಪಾದಕ ಮತ್ತು ಮಿಲಿಟರಿ ತಾಣಗಳ ಮೇಲಿನ ದಾಳಿಯನ್ನು ನಾವು ನಿಲ್ಲಿಸಿದ್ದೇವೆ ಅಷ್ಟೇ. ಪಾಕಿಸ್ತಾನ ಅಪ್ರಚೋದಿತ ದಾಳಿಗಳು ನಡೆದರೆ ಅದಕ್ಕೆ ತಕ್ಕ ಉತ್ತರವನ್ನು ನಮ್ಮ ಸೇನಾ ಪಡೆಗಳು ನೀಡಲಿವೆ ಎಂದರು. ಯಾವುದೇ ಪರಮಾಣು ಬೆದರಿಕೆಗಳು ಅಥವಾ ಬ್ಲ್ಯಾಕ್‌ಮೇಲಿಂಗ್ ಗಳು ನಮ್ಮ ಮುಂದೆ ನಡೆಯುವುದಿಲ್ಲ ಎಂದು ಒತ್ತಿ ಹೇಳಿದ ಮೋದಿ, ಭಾರತದಲ್ಲಿ ಭಯೋತ್ಪಾದಕ ದಾಳಿಗಳಿಗೆ ಸೂಕ್ತ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT