ಕರ್ನಲ್ ಸೋಫಿಯಾ ಖುರೇಷಿ ಮತ್ತು ಬಿಜೆಪಿ ನಾಯಕ ವಿಜಯ್ ಶಾ 
ದೇಶ

'ಕರ್ನಲ್ Sophia Qureshi ಭಯೋತ್ಪಾದಕರ ಸಹೋದರಿ': BJP ಮುಖಂಡನ ಹೇಳಿಕೆ, Congress ಆಕ್ರೋಶ; Video

ಮಧ್ಯ ಪ್ರದೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಬಿಜೆಪಿ ನಾಯಕ ವಿಜಯ್ ಶಾ, ಪ್ರಧಾನಿ ಮೋದಿ ಅವರನ್ನು ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಕರೆದಿದ್ದಾರೆ.

ಭೋಪಾಲ್: ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಬ್ರೀಫಿಂಗ್ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ (Sophia Qureshi) ಭಯೋತ್ಪಾದಕರ ಸಹೋದರಿ ಎಂದು ಮಧ್ಯಪ್ರದೇಶ ಬಿಜೆಪಿ ನಾಯಕ ಹಾಗೂ ಸಚಿವ ವಿಜಯ್ ಶಾ (Vijay Shah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಮಧ್ಯಪ್ರದೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಬಿಜೆಪಿ ನಾಯಕ ವಿಜಯ್ ಶಾ, ಪ್ರಧಾನಿ ಮೋದಿ ಅವರನ್ನು ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಕರೆದಿದ್ದಾರೆ.

ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ವಿಜಯ್ ಶಾ ಹೇಳಿಕೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ.

ವಿಜಯ್ ಶಾ ಹೇಳಿದ್ದೇನು?

ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಹಲ್ಮಾ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಮಾಡಿದ ಭಾಷಣದ ಕ್ಲಿಪ್ ಅನ್ನು ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಆ ವಿಡಿಯೋದಲ್ಲಿ ಸಚಿವ ವಿಜಯ್ ಶಾ, ಹಿಂದಿಯಲ್ಲಿ, "ಅವರು (ಭಯೋತ್ಪಾದಕರು) ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಒರೆಸುವ ಮೂಲಕ ಅವರನ್ನು ಅಗೌರವಗೊಳಿಸಿದ್ದರು. ಆದರೆ ಅವರಿಗೆ ಸೂಕ್ತ ಉತ್ತರ ನೀಡಲು ನಾವು ಅವರ ಸ್ವಂತ ಸಹೋದರಿಯನ್ನು ಕಳುಹಿಸಿದ್ದೇವೆ" ಎಂದು ಹೇಳುತ್ತಿರುವುದು ಕೇಳಿಬರುತ್ತದೆ.

ಇಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರಗಾಮಿಗಳನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ ಮಹಿಳೆ ಕರ್ನಲ್ ಸೋಫಿಯಾ ಖುರೇಷಿ ಮಟ್ಟಹಾಕಿದ್ದಾರೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ.

ಪಾಕಿಸ್ತಾನದಲ್ಲಿ ಭಯೋತ್ಪಾದಕರ ವಿರುದ್ಧ ಭಾರತ ನಡೆಸಿದ ಬಲವಾದ ಪ್ರತೀಕಾರಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸುವಾಗ ವಿಜಯ್ ಶಾ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸದಿದ್ದರೂ, ಅವರ ಹೇಳಿಕೆಗಳನ್ನು ಕರ್ನಲ್ ಸೋಫಿಯಾ ಖುರೇಷಿಯ ಪರೋಕ್ಷ ಉಲ್ಲೇಖವೆಂದು ವ್ಯಾಪಕವಾಗಿ ಅರ್ಥೈಸಲಾಗಿದೆ. ಈ ಹೇಳಿಕೆ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು ಮಾತ್ರವಲ್ಲದೇ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ಕೆಂಡಾಮಂಡಲ

ಈ ವಿಡಿಯೋವನ್ನು ಹಂಚಿಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್, 'ಕರ್ನಲ್ ಸೋಫಿಯಾ ಖುರೇಷಿ ಭಯೋತ್ಪಾದಕರ ಸಹೋದರಿ' - ಈ ಅವಮಾನಕರ ಹೇಳಿಕೆಯನ್ನು ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ಅವರು ನೀಡಿದ್ದಾರೆ. ಪ್ರತಿಯೊಬ್ಬ ಭಾರತೀಯನೂ ಭಾರತದ ಮಗಳು ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಹೆಮ್ಮೆಪಡುತ್ತಾರೆ. ಆದರೆ ಅವರ ಬಗ್ಗೆ ಅಂತಹ ನಾಚಿಕೆಗೇಡಿನ ಹೇಳಿಕೆಯನ್ನು ನೀಡಲಾಗಿದೆ. ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಹಣೆಪಟ್ಟಿ ಕಟ್ಟಲಾಗಿದೆ. ಇದು ನಮ್ಮ ವೀರ ಸಶಸ್ತ್ರ ಪಡೆಗಳಿಗೆ ಮಾಡಿದ ಅವಮಾನ" ಎಂದು ಕಾಂಗ್ರೆಸ್ ವಿಡಿಯೋವನ್ನು ಹಂಚಿಕೊಂಡಿದೆ.

ಅಂತೆಯೇ ವಿವಾದಾತ್ಮಕ ಹೇಳಿಕೆಯನ್ನು ಪ್ರಶ್ನಿಸಿದ ಕಾಂಗ್ರೆಸ್, 'ವಿಜಯ್ ಶಾ ನರೇಂದ್ರ ಮೋದಿಯವರ ಆಪ್ತ ಸಹಚರ ಎಂದು ಹೇಳಿಕೊಂಡು ಅವರನ್ನು ತಮ್ಮ ಮಾರ್ಗದರ್ಶಕ ಎಂದು ಕರೆದರೆ, ಬಿಜೆಪಿ ಅವರ ರಾಜೀನಾಮೆಗೆ ಒತ್ತಾಯಿಸುತ್ತದೆಯೇ? ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಈ ನೀಚ ಮನಸ್ಥಿತಿಗೆ ಕ್ಷಮೆಯಾಚಿಸುತ್ತಾರೆಯೇ? ಅಥವಾ, ಎಂದಿನಂತೆ, ವಿಜಯ್ ಶಾ ಅವರ ಈ ಶೋಚನೀಯ ಮನಸ್ಥಿತಿಗೆ ಪ್ರತಿಫಲವಾಗಿ, ಅವರ ಬೆಂಬಲಕ್ಕಾಗಿ ರ್ಯಾಲಿಗಳನ್ನು ನಡೆಸಲಾಗುತ್ತದೆಯೇ?" ಎಂದು ಕೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video