ಶ್ರೀನಗರ ವಿಮಾನ ನಿಲ್ದಾಣ 
ದೇಶ

ಕಾಶ್ಮೀರ: ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಪುನರಾರಂಭ

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಮೇ 9 ರಂದು ಶ್ರೀನಗರ ವಿಮಾನ ನಿಲ್ದಾಣ ಸೇರಿದಂತೆ ಗಡಿ ರಾಜ್ಯಗಳಾದ್ಯಂತ 31 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳವಾರ ಮಧ್ಯಾಹ್ನ ವಿಮಾನ ಸೇವೆ ಪುನರಾರಂಭಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಕಾಶ್ಮೀರ ಕಣಿವೆಗೆ ಆಗಮಿಸುವ ಮತ್ತು ಅಲ್ಲಿಂದ ತೆರಳುವ ಹಲವಾರು ವಿಮಾನಗಳು ವಿಳಂಬವಾಗಿವೆ ಎಂದು ಅವರು ಹೇಳಿದ್ದಾರೆ. ಆದರೆ ಕೆಲವು ವಿಮಾನಯಾನ ಸಂಸ್ಥೆಗಳು ಈಗಾಗಲೇ ದಿನದ ಸೇವೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿವೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಮೇ 9 ರಂದು ಶ್ರೀನಗರ ವಿಮಾನ ನಿಲ್ದಾಣ ಸೇರಿದಂತೆ ಗಡಿ ರಾಜ್ಯಗಳಾದ್ಯಂತ 31 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು.

ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ಸೇರಿದಂತೆ 31 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!