ಮನೀಶ್ ಸಿಸೋಡಿಯಾ  
ದೇಶ

ಪಾಕ್ ನೊಂದಿಗೆ ಕದನ ವಿರಾಮ: ಕೇಂದ್ರದ ವಿರುದ್ಧ ಸಿಸೋಡಿಯಾ ವಾಗ್ದಾಳಿ; ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆ!

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಯಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಲು ಆಪರೇಷನ್ ಸಿಂಧೂರ್ ಪ್ರಾರಂಭಿಸಿದ ನಂತರ ತರ್ಕಬದ್ಧವಿಲ್ಲದೆ ಕದನ ವಿರಾಮ ಘೋಷಣೆ ಮಾಡಿದ ವಿಧಾನವನ್ನು ಪ್ರಶ್ನಿಸಿದರು.

ಚಂಡೀಗಢ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗಿನ ಕದನ ವಿರಾಮವನ್ನು ನಿಭಾಯಿಸಿದ ಬಗ್ಗೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಂದ ಉತ್ತರ ಬಯಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಎಎಪಿ ನಾಯಕ, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಯಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಲು ಆಪರೇಷನ್ ಸಿಂಧೂರ್ ಪ್ರಾರಂಭಿಸಿದ ನಂತರ ತರ್ಕಬದ್ಧವಿಲ್ಲದೆ ಕದನ ವಿರಾಮ ಘೋಷಣೆ ಮಾಡಿದ ವಿಧಾನವನ್ನು ಪ್ರಶ್ನಿಸಿದರು.

ಹಠಾತ್ ಕದನ ವಿರಾಮ ಘೋಷಣೆಯಿಂದ ಗಳಿಸಿದ್ದನ್ನು ದುರ್ಬಲಗೊಳಿಸಿದೆ. ಜನರನ್ನು ಗೊಂದಲ ಮತ್ತು ನಿರಾಶೆಗೊಳಿಸಿದೆ. ಪಾಕಿಸ್ತಾನವು ಕದನ ವಿರಾಮಕ್ಕೆ ಮುಂದಾಗಿದ್ದರೆ, ಪಹಲ್ಗಾಮ್ ದಾಳಿಯ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸುವ ಸಿಕ್ಕ ಹತೋಟಿಯನ್ನು ಬಳಸಿಕೊಳ್ಳಬೇಕಾಗಿತ್ತು ಎಂದರು.

ಇಡೀ ರಾಷ್ಟ್ರ ಮತ್ತು ಪ್ರತಿಪಕ್ಷಗಳು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸುವಲ್ಲಿ ಸರ್ಕಾರದೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿದಾಗ, ಸರ್ಕಾರವು ಇದ್ದಕ್ಕಿದ್ದಂತೆ ಕದನ ವಿರಾಮಕ್ಕೆ ಏಕೆ ಒಪ್ಪಿಕೊಂಡಿತು? ಪಾಕಿಸ್ತಾನ ಕದನ ವಿರಾಮದ ಬಗ್ಗೆ ತುಂಬಾ ಉತ್ಸುಕವಾಗಿದ್ದರೆ, ಪಹಲ್ಗಾಮ್ ದಾಳಿಯ ಭಯೋತ್ಪಾದಕರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಕೇಂದ್ರವು ಪಾಕಿಸ್ತಾನವನ್ನು ಏಕೆ ಒತ್ತಾಯಿಸಲಿಲ್ಲ? ಎಂದು ಪ್ರಶ್ನಿಸಿದರು.

ಪಹಲ್ಗಾಮ್ ದಾಳಿಯಲ್ಲಿ ಉಗ್ರರು ಮಹಿಳೆಯರ ಸಿಂಧೂರ ಅಳಿಸಿದ್ದಾರೆ. ಪಾಕಿಸ್ತಾನ ಮನವಿ ಮಾಡಿತು ಅಂತಾ ಕದನ ವಿರಾಮಕ್ಕೆ ಒಪ್ಪಿಕೊಂಡದ್ದು ಎಷ್ಟು ಸರಿ? ಮೋದಿ ಅವರು ಪಾಕಿಸ್ತಾನದ ಪ್ರಧಾನಿಯನ್ನು ಕರೆದು 1972 ರ ಒಪ್ಪಂದದಂತೆ ಲಿಖಿತ ಒಪ್ಪಂದಕ್ಕೆ ಏಕೆ ಸಹಿ ಹಾಕಲಿಲ್ಲ? ಎಂದು ಪ್ರಶ್ನೆ ಎತ್ತಿದರು.

ಭಾರತೀಯ ಅಧಿಕಾರಿಗಳು ಕದನ ವಿರಾಮವನ್ನು ಘೋಷಿಸುವ ಅರ್ಧ ಗಂಟೆ ಮೊದಲು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಗೆ ಕದನ ವಿರಾಮವನ್ನು ಘೋಷಿಸಿದರು? ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕುವ ಮೂಲಕ ಎರಡೂ ದೇಶಗಳನ್ನು ಕದನ ವಿರಾಮಕ್ಕೆ ಒಪ್ಪಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ. ಪ್ರಧಾನಿ ತಮ್ಮ ಭಾಷಣದಲ್ಲಿ ಟ್ರಂಪ್ ಹೇಳಿಕೆಯನ್ನು ಏಕೆ ಪ್ರಸ್ತಾಪಿಸಲಿಲ್ಲ?"ಪ್ರಧಾನಿಯವರ ಮೌನವು ಏನೋ ತಪ್ಪಾಗಿದೆ ಎಂಬುದನ್ನು ಸೂಚಿಸುತ್ತದೆ ಮತ್ತು ಅಂತಹ ವಿಷಯದಲ್ಲಿ ಈ ಮೌನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT