ಜಮ್ಮು-ಕಾಶ್ಮೀರದಲ್ಲಿ ಕಂಡು ಬಂದ ಪೋಸ್ಟರ್ ಗಳು. 
ದೇಶ

ಪಹಲ್ಗಾಮ್ ದಾಳಿ: 3 ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ ರೂ ಇನಾಮು!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ಶ್ರೀನಗರ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದು, ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಇನಾಮು ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ.

ಇದರ ಬೆನ್ನಲ್ಲೇ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ.

ಪೋಸ್ಟರ್‌ನಲ್ಲಿರುವ ಉಗ್ರರ ಕುರಿತು ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಸುಳಿವು ಕೊಟ್ಟವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದೂ ಭರವಸೆ ನೀಡಿದ್ದಾರೆ.

ಇದಕ್ಕೂ ಮೊದಲು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಗೆ ಸೇರಿದ ಮೂವರು ಭಯೋತ್ಪಾದಕರ ಚಿತ್ರವನ್ನು ಬಿಡುಗಡೆ ಮಾಡಲಾಗಿತ್ತು. ಅನಂತ್‌ನಾಗ್‌ ನಿವಾಸಿ ಆದಿಲ್ ಹುಸೇನ್ ಥೋಕರ್, ಪಾಕಿಸ್ತಾನಿ ಪ್ರಜೆ ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಮತ್ತು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿತ್ತು.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು `ಆಪರೇಷನ್ ಸಿಂಧೂರ’ (Operation Sindoor) ಹೆಸರಿನಲ್ಲಿ ಪಾಕ್‌ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತು. ಅದಾದ ಬಳಿಕ ಪಾಕಿಸ್ತಾನ ಹಲವು ಬಾರಿ ಅಪ್ರಚೋದಿತ ದಾಳಿ ನಡೆಸಿದ್ದು, ಮೇ 10ರಂದು ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT