ಕರ್ನಲ್ ಸೋಫಿಯಾ ಖುರೇಷಿ  oline desk
ದೇಶ

ಕರ್ನಲ್ Qureshi ಬಗ್ಗೆ ಹೇಳಿಕೆ: ಮಧ್ಯಪ್ರದೇಶ ಸಚಿವನ ವಿರುದ್ಧ FIR ಗೆ ಹೈಕೋರ್ಟ್ ಸೂಚನೆ

ಬಿಎನ್ಎಸ್ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧಗಳನ್ನು ಮಾಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಭೋಪಾಲ್: ಕರ್ನಲ್ ಸೋಫಿಯಾ ಖುರೇಷಿ ಅವರನ್ನು "ಭಯೋತ್ಪಾದಕರ ಸಹೋದರಿ" ಎಂದು ಕರೆದ ಬಿಜೆಪಿ ಸಚಿವ ವಿಜಯ್ ಶಾ ಅವರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಎಫ್ಐಆರ್ ದಾಖಲಿಸುವಂತೆ ನಿರ್ದೇಶಿಸಿದೆ.

ಬಿಎನ್ಎಸ್ ಅಡಿಯಲ್ಲಿ ಪ್ರಾಥಮಿಕವಾಗಿ ಅಪರಾಧಗಳನ್ನು ಮಾಡಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಶಾ ಮಂಗಳವಾರ ಕರ್ನಲ್ ಖುರೇಷಿ ಅವರನ್ನು ಉದ್ದೇಶಿಸಿ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ದೊಡ್ಡ ವಿವಾದವನ್ನು ಹುಟ್ಟುಹಾಕಿದ್ದಾರೆ. ತೀವ್ರ ಟೀಕೆಗೆ ಗುರಿಯಾದ ಮಧ್ಯಪ್ರದೇಶದ ಸಚಿವರು, ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ಹತ್ತು ಬಾರಿ ಕ್ಷಮೆಯಾಚಿಸಲು ಸಿದ್ಧರಿರುವುದಾಗಿ ಹೇಳಿದರು, ಕರ್ನಲ್ ಖುರೇಷಿಯನ್ನು ತಮ್ಮ ಸಹೋದರಿಗಿಂತ ಹೆಚ್ಚಾಗಿ ಗೌರವಿಸುವುದಾಗಿ ಹೇಳಿದರು.

ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಬ್ರೀಫಿಂಗ್ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ (Sophia Qureshi) ಭಯೋತ್ಪಾದಕರ ಸಹೋದರಿ ಎಂದು ಮಧ್ಯಪ್ರದೇಶ ಬಿಜೆಪಿ ನಾಯಕ ಹಾಗೂ ಸಚಿವ ವಿಜಯ್ ಶಾ (Vijay Shah) ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಮಧ್ಯಪ್ರದೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಬಿಜೆಪಿ ನಾಯಕ ವಿಜಯ್ ಶಾ, ಪ್ರಧಾನಿ ಮೋದಿ ಅವರನ್ನು ಹೊಗಳುವ ಭರದಲ್ಲಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಭಯೋತ್ಪಾದಕರ ಸಹೋದರಿ ಎಂದು ಕರೆದಿದ್ದರು.

ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ವಿಜಯ್ ಶಾ ಹೇಳಿಕೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ.

ವಿಜಯ್ ಶಾ ಹೇಳಿದ್ದೇನು?

ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಹಲ್ಮಾ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಮಾಡಿದ ಭಾಷಣದ ಕ್ಲಿಪ್ ಅನ್ನು ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಆ ವಿಡಿಯೋದಲ್ಲಿ ಸಚಿವ ವಿಜಯ್ ಶಾ, ಹಿಂದಿಯಲ್ಲಿ, "ಅವರು (ಭಯೋತ್ಪಾದಕರು) ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಒರೆಸುವ ಮೂಲಕ ಅವರನ್ನು ಅಗೌರವಗೊಳಿಸಿದ್ದರು. ಆದರೆ ಅವರಿಗೆ ಸೂಕ್ತ ಉತ್ತರ ನೀಡಲು ನಾವು ಅವರ ಸ್ವಂತ ಸಹೋದರಿಯನ್ನು ಕಳುಹಿಸಿದ್ದೇವೆ" ಎಂದು ಹೇಳುತ್ತಿರುವುದು ಕೇಳಿಬರುತ್ತದೆ.

ಇಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರಗಾಮಿಗಳನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ ಮಹಿಳೆ ಕರ್ನಲ್ ಸೋಫಿಯಾ ಖುರೇಷಿ ಮಟ್ಟಹಾಕಿದ್ದಾರೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ.

ಪಾಕಿಸ್ತಾನದಲ್ಲಿ ಭಯೋತ್ಪಾದಕರ ವಿರುದ್ಧ ಭಾರತ ನಡೆಸಿದ ಬಲವಾದ ಪ್ರತೀಕಾರಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸುವಾಗ ವಿಜಯ್ ಶಾ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸದಿದ್ದರೂ, ಅವರ ಹೇಳಿಕೆಗಳನ್ನು ಕರ್ನಲ್ ಸೋಫಿಯಾ ಖುರೇಷಿಯ ಪರೋಕ್ಷ ಉಲ್ಲೇಖವೆಂದು ವ್ಯಾಪಕವಾಗಿ ಅರ್ಥೈಸಲಾಗಿದೆ. ಈ ಹೇಳಿಕೆ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು ಮಾತ್ರವಲ್ಲದೇ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT