ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: ನಕ್ಸಲ್‌ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು CRPF ಅಧಿಕಾರಿ ಸಾವು; ಮೂವರಿಗೆ ಗಾಯ

26 ನೇ ಬೆಟಾಲಿಯನ್‌ಗೆ ಸೇರಿದ ಎರಡನೇ ಕಮಾಂಡ್ ಶ್ರೇಣಿಯ ಅಧಿಕಾರಿ ಎಂ. ಪ್ರಬೋ ಸಿಂಗ್ ಅವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ರಾಂಚಿ: ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಸಿಡಿಲು ಬಡಿದು 46 ವರ್ಷದ ಸಿಆರ್‌ಪಿಎಫ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ಸಂಜೆ 5:30 ರ ಸುಮಾರಿಗೆ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕೆರಿಬುರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿತ್ತು ಎಂದು ಹೇಳಿದ್ದಾರೆ. 26 ನೇ ಬೆಟಾಲಿಯನ್‌ಗೆ ಸೇರಿದ ಎರಡನೇ ಕಮಾಂಡ್ ಶ್ರೇಣಿಯ ಅಧಿಕಾರಿ ಎಂ. ಪ್ರಬೋ ಸಿಂಗ್ ಅವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಸಹಾಯಕ ಕಮಾಂಡೆಂಟ್ ಸುಬೀರ್ ಕುಮಾರ್ ಮಂಡಲ್ (49) ಗಾಯಗೊಂಡು ನೊಮುಂಡಿಯ ಟಾಟಾ ಮುಖ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಜಾರ್ಖಂಡ್ ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಿಡಿಲು ಬಡಿದಾಗ ಎಲ್ಲಾ ಸಿಬ್ಬಂದಿ ಸಿಆರ್‌ಪಿಎಫ್ ಭದ್ರತಾ ಹೊರಠಾಣೆಯಲ್ಲಿ ಇದ್ದರು. ಮಳೆಯ ಕಾರಣದಿಂದ ತ್ವರಿತ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು, ಹೀಗಾಗಿ ಅವರನ್ನು ಸ್ಥಳಾಂತರಿಸಲು ಸಮಯ ತೆಗೆದುಕೊಂಡಿತು ಎಂದು ಅವರು ಹೇಳಿದರು. ಸಿಂಗ್ ಮಣಿಪುರದ ಪಶ್ಚಿಮ ಇಂಫಾಲ್ ಜಿಲ್ಲೆಯವರಾಗಿದ್ದಾರೆ, ಮಂಡಲ್ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಗೆ ಸೇರಿದವರು.

ನಕ್ಸಲ್ ವಿರೋಧಿ ಕಾರ್ಯಾಚರಣೆ ಕರ್ತವ್ಯಕ್ಕಾಗಿ ಅರಣ್ಯ ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಜಾರ್ಖಂಡ್ ಪೊಲೀಸರ ಜಂಟಿ ಪಡೆಗಳನ್ನು ಅಧಿಕಾರಿಗಳು ಮುನ್ನಡೆಸುತ್ತಿದ್ದರು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ರಕ್ಷಾ ಬಂಧನದ ಇತಿಹಾಸ ಏನು? ಸಹೋದರರಿಗೆ ರಾಖಿ ಕಟ್ಟುವುದರ ಮಹತ್ವ ತಿಳಿದುಕೊಳ್ಳಿ!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು