ಭಾರತೀಯ ಸೇನಾಧಿಕಾರಿಗಳು (ಸಂಗ್ರಹ ಚಿತ್ರ) 
ದೇಶ

India-Pak tensions: ರಕ್ಷಣಾ ವಲಯಕ್ಕೆ ಹೆಚ್ಚಿನ ಒತ್ತು; ಹೆಚ್ಚುವರಿಯಾಗಿ 50,000 ಕೋಟಿ ರೂ ಮೀಸಲಿಡಲು ಕೇಂದ್ರ ಸರ್ಕಾರ ಮುಂದು!

ರಕ್ಷಣಾ ಕ್ಷೇತ್ರಕ್ಕೆ ಹೆಚ್ಚುವರಿ ಹಣ ಪಡೆಯಲು ಸಂಸತ್‌ ನ ಚಳಿಗಾಲದ ಅಧಿವೇಶನದಲ್ಲಿ ಅನುಮತಿ ಪಡೆಯಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಭಾರತದ ರಕ್ಷಣಾ ವಲಯಕ್ಕೆ ಮತ್ತಷ್ಟು ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 50,000 ಕೋಟಿ ಮೀಸಲಿಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ಬಜೆಟ್​ನಲ್ಲಿ ಸೇನೆಗೆ ಒಟ್ಟು 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದ್ದರು. ಇದು 2024-25ರಲ್ಲಿನ 6.22 ಲಕ್ಷ ಕೋಟಿ ರೂಪಾಯಿಗಳಿಗಿಂತ ಶೇ.9.2 ರಷ್ಟು ಹೆಚ್ಚು ಮಾಡಲಾಗಿತ್ತು.

ಈಗ ಹೆಚ್ಚುವರಿಯಾಗಿ 50,000 ಕೋಟಿ ರೂಪಾಯಿಗಳಷ್ಟು ಪ್ರಸ್ತಾವನೆ ಸಲ್ಲಿಸಲಾಗಿದ್ದರಿಂದ ಮುಂದೆ ಇದು 7 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚಾಗುವ ನಿರೀಕ್ಷೆ ಎಂದು ಹೇಳಲಾಗುತ್ತಿದೆ.

ಆಪರೇಷನ್ ಸಿಂಧೂರದ ಬಳಿಕ ಸೇನೆಗೆ ಹೆಚ್ಚುವರಿ ಹಣ ಮೀಸಲು ಇಡಲು ರಕ್ಷಣಾ ಬಜೆಟ್​ನಲ್ಲಿ ರೂ.50 ಸಾವಿರ ಕೋಟಿ ಹೆಚ್ಚಳಕ್ಕೆ ತೀರ್ಮಾನ ಮಾಡಲಾಗಿದೆ. ರಕ್ಷಣಾ ಕ್ಷೇತ್ರಕ್ಕೆ ಹೆಚ್ಚುವರಿ ಹಣ ಪಡೆಯಲು ಸಂಸತ್‌ ನ ಚಳಿಗಾಲದ ಅಧಿವೇಶನದಲ್ಲಿ ಅನುಮತಿ ಪಡೆಯಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಅನುದಾನದಿಂದ ಹೊಸ ಶಸ್ತ್ರಾಸ್ತ್ರಗಳು, ರಕ್ಷಣಾ ಸಾಮಗ್ರಿ ಹಾಗೂ ತಂತ್ರಜ್ಞಾನ ಖರೀದಿ ಜೊತೆಗೆ ಸಂಶೋಧನೆ ಮತ್ತು ಅಭಿವೃದ್ಧಿಗೆ ವಿನಿಯೋಗಿಸುವ ಸಾಧ್ಯತೆಗಳಿವೆ.

ಎನ್​ಡಿಎ ಸರ್ಕಾರದ ಅಧಿಕಾರಕ್ಕೆ ಬಂದ ಮೇಲೆ 10 ವರ್ಷಗಳಲ್ಲಿ ರಕ್ಷಣಾ ಬಜೆಟ್ ಮೂರು ಪಟ್ಟು ಹೆಚ್ಚಾಗಿದೆ. 2014-15ರಲ್ಲಿ ರಕ್ಷಣಾ ಬಜೆಟ್​ 2.29 ಲಕ್ಷ ಕೋಟಿಗಳಾಗಿತ್ತು. ಇದು ಈಗ 6.81 ಲಕ್ಷ ಕೋಟಿ ರೂಪಾಯಿಗಳು ಆಗಿದೆ. ಇದು ಕೇಂದ್ರ ಸರ್ಕಾರದ ಒಟ್ಟು ಬಜೆಟ್​ನ ಶೇ.13.45 ರಷ್ಟು ಆಗಿದ್ದು, ಎಲ್ಲ ಸಚಿವಾಲಯಗಳಿಗಿಂತ ರಕ್ಷಣಾ ಇಲಾಖೆ ಅತಿ ಹೆಚ್ಚು ಅನುದಾನ ಪಡೆಯುತ್ತಿದೆ.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, ಈ ದಾಳಿಯ ನಂತರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ಆಪರೇಷನ್ ಸಿಂಧೂರ್ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಇದರ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ರಕ್ಷಣಾ ವಲಯದ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT