ಸರ್ವಪಕ್ಷ ನಿಯೋಗ 
ದೇಶ

ಪಾಕ್ 'ಉಗ್ರ ಮುಖ' ಬಯಲಿಗೆ ಭಾರತ ಪಣ: 7 ಸಂಸದರ ನೇತೃತ್ವದ ನಿಯೋಗ ಶೀಘ್ರದಲ್ಲೇ ವಿದೇಶಕ್ಕೆ!

ಪಾಕಿಸ್ತಾನದ ವಿರುದ್ದ ಬೃಹತ್ ರಾಜತಾಂತ್ರಿಕ ದಾಳಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ತಲಾ 5 ಸಂಸದರನ್ನು ಒಳಗೊಂಡ 6-7 ಸಂಸದರ ನೇತೃತ್ವದ ನಿಯೋಗವೊಂದನ್ನು ವಿಶ್ವದ ವಿವಿಧ ದೇಶಗಳಿಗೆ ರವಾನಿಸಲು ನಿರ್ಧರಿಸಿದೆ.

ನವದೆಹಲಿ: ಆಪರೇಷನ್ ಸಿಂಧೂರ್ ಮೂಲಕ ಗಡಿಯಾಚೆಗಿನ ಭಯೋತ್ಪಾದನೆ ವಿರುದ್ದ ಪ್ರತೀಕಾರ ತೀರಿಸಿಕೊಂಡಿರುವ ಭಾರತ, ಇದೀಗ ರಾಜತಾಂತ್ರಿಕ ಮಾರ್ಗಗಳ ಮೂಲಕ ಪಾಕಿಸ್ತಾನ ಉಗ್ರ ಮುಖವಾಡವನ್ನು ಬಯಲು ಮಾಡಲು ಪಣ ತೊಟ್ಟಿದ್ದು, ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಸರ್ವಪಕ್ಷ ನಿಯೋಗವನ್ನು ವಿದೇಶಕ್ಕೆ ಕಳುಹಿಸಲು ನಿರ್ಧರಿಸಿದೆ.

ಪಾಕಿಸ್ತಾನದ ವಿರುದ್ದ ಬೃಹತ್ ರಾಜತಾಂತ್ರಿಕ ದಾಳಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ತಲಾ 5 ಸಂಸದರನ್ನು ಒಳಗೊಂಡ 5-6 6-7 ಸಂಸದರ ನೇತೃತ್ವದ ನಿಯೋಗವೊಂದನ್ನು ವಿಶ್ವದ ವಿವಿಧ ದೇಶಗಳಿಗೆ ರವಾನಿಸಲು ನಿರ್ಧರಿಸಿದೆ.

ಈ ನಿಯೋಗ ಮೇ.22ರಿಂದ ವಿದೇಶ ಪ್ರವಾಸ ಆರಂಭಿಸಲಿದ್ದು, ಅಮೆರಿಕಾ, ಬ್ರಿಟನ್, ದಕ್ಷಿಣ ಆಫ್ರಿಕಾ, ಕತಾರ್, ಯುಎಇ ಮತ್ತಿತರ ದೇಶಗಳಿಗೆ ಪ್ರವಾಸ ಮಾಡಲಿದೆ.

ಭೇಟಿ ವೇಳೆ ಭಾರತ-ಪಾಕಿಸ್ತಾನ ಸಂಘರ್ಷ, ಆಪರೇಷನ್ ಸಿಂಧೂರಕ್ಕೆ ಕಾರಣವಾದ ಅಂಶಗಳು, ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿರುವ ವಿಚಾರಗಳ ಕುರಿತು ವಿದೇಶಿ ನಾಯಕರಿಗೆ ವಿವರಣೆ ನೀಡಲಿದ್ದಾರೆ. ಈ ಮೂಲಕ ಪಾಕಿಸ್ತಾನದ ಬಂಡವಾಳ ಬಯಲು ಮಾಡುವ ಪ್ರಯತ್ನ ನಡೆಸಲಿದ್ದಾರೆ.

ಈ ಪ್ರಮುಖ ಕಾರ್ಯವನ್ನು ನಿರ್ವಹಿಸಲು ಕೇಂದ್ರ ಸರ್ಕಾರ ಶನಿವಾರ (ಮೇ 17) ಶಶಿ ತರೂರ್ ಮತ್ತು ವಿರೋಧ ಪಕ್ಷದ ಇಬ್ಬರು ಮತ್ತು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಲ್ವರು ಸೇರಿದಂತೆ ಆರು ಇತರ ಸಂಸದರನ್ನು ಹೆಸರಿಸಿದೆ.

ಅತ್ಯಂತ ಮುಖ್ಯವಾದ ಕ್ಷಣಗಳಲ್ಲಿ, ಭಾರತ ಒಗ್ಗಟ್ಟಿನಿಂದ ನಿಲ್ಲುತ್ತದೆ” ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಿಯೋಗದಲ್ಲಿರುವ ಎಲ್ಲ ಏಳು ಮಂದಿ ಸದಸ್ಯರು ಭಾರತದ “ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯ ಹಂಚಿಕೆಯ ಸಂದೇಶ”ವನ್ನು ಹೊತ್ತುಕೊಂಡು ಶೀಘ್ರದಲ್ಲೇ ಪ್ರಮುಖ ಪಾಲುದಾರ ರಾಷ್ಟ್ರಗಳಿಗೆ ಭೇಟಿ ನೀಡಲಿವೆ. ರಾಜಕೀಯವನ್ನು ಮೀರಿ, ಭಿನ್ನಾಭಿಪ್ರಾಯಗಳನ್ನು ಮೀರಿ ರಾಷ್ಟ್ರೀಯ ಏಕತೆಯ ಪ್ರಬಲ ಪ್ರತಿಬಿಂಬ ಇದು ಎಂದು ಹೇಳಿದ್ದಾರೆ.

7 ಮಂದಿ ಸದಸ್ಯರ ನಿಯೋಗದಲ್ಲಿ ಶಶಿ ತರೂರ್‌ (ಕಾಂಗ್ರೆಸ್), ರವಿಶಂಕರ್‌ ಪ್ರಸಾದ್‌ (ಬಿಜೆಪಿ), ಸಂಜಯ್‌ ಕುಮಾರ್‌ ಝಾ (ಜೆಡಿಯು), ಬೈಜಯಂತ್‌ ಪಂಡಾ (ಬಿಜೆಪಿ), ಕನ್ನಿಮೊಳಿ ಕರುಣಾನಿಧಿ (ಡಿಎಂಕೆ), ಸುಪ್ರಿಯಾ ಸುಳೆ (ಎನ್‌ ಸಿಪಿ), ಶ್ರೀಕಾಂತ್‌ ಏಕನಾಥ್‌ ಶಿಂಧೆ (ಶಿವಸೇನೆ) ಇರಲಿದ್ದಾರೆ.

ಈ ನಡುವೆ ಕಾಂಗ್ರೆಸ್​​​​ ಪಕ್ಷದ ಸೂಚಿಸಿದ ಸಂಸದರ ಹೆಸರನ್ನು ಕಾಂಗ್ರೆಸ್ ನಾಯಕ​​ ಜೈರಾಮ್ ರಮೇಶ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

ಇದರಲ್ಲಿ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಲೋಕಸಭೆ ಸಂಸದ ಹಾಗೂ ಉಪನಾಯಕ ಗೌರವ್ ಗೊಗೊಯ್, ಕರ್ನಾಟಕದ ಸಂಸದ ಡಾ. ಸೈಯದ್ ನಸೀರ್ ಹುಸೇನ್, ಸಂಸದ ರಾಜಾ ಬ್ರಾರ್​​ರ ಹೆಸರು ಒಳಗೊಂಡಿದೆ.

ಕಾಂಗ್ರೆಸ್​​ ನೀಡಿದ ಪಟ್ಟಿಯಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಡಾ. ಸೈಯದ್ ನಸೀರ್ ಹುಸೇನ್ ಹೆಸರೂ ಒಳಗೊಂಡಿತ್ತು. ಇವರು ರಾಜ್ಯಸಭೆಗೆ ಆಯ್ಕೆಯಾದ ಸಂದರ್ಭದಲ್ಲಿ ಅವರು ಬೆಂಗಲಿಗರು ಕರ್ನಾಟಕ ವಿಧಾನಸೌಧದ ಆವರಣದಲ್ಲಿ ‘‘ಪಾಕಿಸ್ತಾನ ಜಿಂದಾಬಾದ್’’ ಎಂದು ಘೋಷಣೆ ಕೂಗಿದ್ದು ದೇಶ ಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು ಎಂಬುದು ಗಮನಾರ್ಹ. ಇದೀಗ ಕೇಂದ್ರಕ್ಕೆ ಕಾಂಗ್ರೆಸ್​​​ ಕಳುಹಿಸಿದ ಪಟ್ಟಿಯಲ್ಲಿ ಅವರ ಹೆಸರು ಕೂಡ ಇತ್ತು. ಆದರೆ, ಕೇಂದ್ರ ಸರ್ಕಾರ ಆ ಪಟ್ಟಿಯನ್ನು ತಿರಸ್ಕರಿಸಿ, ಬೇರೆ ಸಂಸದರನ್ನು ಈ ನಿಯೋಗಕ್ಕೆ ಆಯ್ಕೆ ಮಾಡಿದೆ.

ನಿನ್ನೆ ಬೆಳಿಗ್ಗೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದರು. ಪಾಕಿಸ್ತಾನದಿಂದ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಕಳುಹಿಸಬೇಕಾದ ನಿಯೋಗಗಳಿಗೆ 4 ಸಂಸದರ ಹೆಸರುಗಳನ್ನು ಸಲ್ಲಿಸಲು INC ಯನ್ನು ಕೇಳಲಾಯಿತು.

INC ಪರವಾಗಿ ಈ ಕೆಳಗಿನ ಹೆಸರುಗಳನ್ನು ನೀಡಿ ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದಿದ್ದಾರೆ: ಮಾಜಿ ಕೇಂದ್ರ ಕ್ಯಾಬಿನೆಟ್ ಸಚಿವ ಶ್ರೀ ಆನಂದ್ ಶರ್ಮಾ; ಲೋಕಸಭೆಯಲ್ಲಿ INC ಉಪನಾಯಕ ಶ್ರೀ ಗೌರವ್ ಗೊಗೊಯ್; ರಾಜ್ಯಸಭೆಯ ಸಂಸದ ಡಾ. ಸೈಯದ್ ನಸೀರ್ ಹುಸೇನ್; ಮತ್ತು ಲೋಕಸಭೆಯ ಸಂಸದ ಶ್ರೀ ರಾಜಾ ಬ್ರಾರ್ ಹೆಸರನ್ನು ಉಲ್ಲೇಖಿಸಿದ್ದಾರೆ.

ಕುತೂಹಲಕಾರಿಯಾಗಿ, ಜೈರಾಮ್ ರಮೇಶ್ ಅವರು ಕಾಂಗ್ರೆಸ್ ಸಂಸದೀಯ ವ್ಯವಹಾರಗಳ ಸಚಿವರಿಗೆ ಸಲ್ಲಿಸಿದ ಪಟ್ಟಿಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಅವರ ಹೆಸರು ಉಲ್ಲೇಖಿಸಲಾಗಿಲ್ಲ. ಆದಾಗ್ಯೂ, ಸಚಿವ ಕಿರಣ್ ರಿಜಿಜು ಅವರು ಆಪರೇಷನ್ ಸಿಂದೂರ ಬಗ್ಗೆ ವಿಶ್ವ ನಾಯಕರಿಗೆ ಮಾಹಿತಿ ನೀಡುವ ವಿಶ್ವ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ 7 ಸಂಸದರ ಪಟ್ಟಿಯಲ್ಲಿ ತರೂರ್ ಅವರ ಹೆಸರನ್ನು ಹೆಸರಿಸಿರುವುದು ಕುತೂಹಲ ಮೂಡಿಸಿದೆ.

ಏತನ್ಮಧ್ಯೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸರ್ಕಾರವು ನಾಲ್ವರು ಕಾಂಗ್ರೆಸ್ ಸಂಸದರನ್ನು, ವಿಶೇಷವಾಗಿ ತರೂರ್ ಮತ್ತು ತಿವಾರಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ಅಸಮಾಧಾನಗೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ರಾಹುಲ್ ಗಾಂಧಿ ಅವರು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರೊಂದಿಗೆ ಮಾತನಾಡಿದ್ದು, ಕೇಂದ್ರ ಸರ್ಕಾರ ಆಯ್ಕೆ ಮಾಡಿದ ಹೆಸರುಗಳ ಬಗ್ಗೆ ತಮ್ಮ ಅಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ವಿರೋಧ ಪಕ್ಷದ ನಾಯಕರೊಬ್ಬರು ಮಾತನಾಡಿ, ಸರ್ಕಾರವು ಸಂಸದರನ್ನು ಆಯ್ಕೆ ಮಾಡುವ ವೇಳೆ ವಿಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿಲ್ಲ. ಪ್ರಧಾನಮಂತ್ರಿಗಳ ಕಚೇರಿ ಈ ಮೊದಲೇ ಪಟ್ಟಿಯನ್ನು ಸಿದ್ಧಪಡಿಸಿದ್ದು, ಅದನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಸಾರ್ವಜನಿಕವಾಗಿ ತಿಳಿಸಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT