ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: 'ಅಲ್ಲಾಹು, ಪಾಕ್ ಸೈನಿಕರನ್ನು ಸುರಕ್ಷಿತವಾಗಿಡು' ಎಂಬ ವಿಡಿಯೋ ಹಂಚಿಕೊಂಡ ಸರ್ಕಾರಿ ಶಾಲೆ ಶಿಕ್ಷಕಿ ಅಮಾನತು!

ಮೆಹತ್ವಾರದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಶಹನಾಜ್ ಪರ್ವೀನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸೆಹೋರ್ ಜಿಲ್ಲಾ ಶಿಕ್ಷಣಾಧಿಕಾರಿ ಸಂಜಯ್ ಸಿಂಗ್ ತೋಮರ್ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಆಫರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಪಾಕಿಸ್ತಾನಿ ಮಹಿಳೆಯೊಬ್ಬರು ಆ ದೇಶದ ಸೈನಿಕರ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮಧ್ಯಪ್ರದೇಶದ ಸೆಹೋರ್‌ನಲ್ಲಿ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ 55 ಕಿಲೋಮೀಟರ್ ದೂರದಲ್ಲಿರುವ ಮೆಹತ್ವಾರದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಶಹನಾಜ್ ಪರ್ವೀನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸೆಹೋರ್ ಜಿಲ್ಲಾ ಶಿಕ್ಷಣಾಧಿಕಾರಿ ಸಂಜಯ್ ಸಿಂಗ್ ತೋಮರ್ ತಿಳಿಸಿದ್ದಾರೆ.

ಬಜರಂಗದಳದ ದೂರು ಮತ್ತು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಶಿಕ್ಷಕಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ 'ಅಲ್ಲಾಹು, ಪಾಕಿಸ್ತಾನಿ ಸೈನಿಕರನ್ನು ಸುರಕ್ಷಿತವಾಗಿಡು' ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಅಂತಹ ವಿಚಾರಗಳನ್ನು ಪೋಸ್ಟ್ ಮಾಡುವುದು ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸುವ ಸರ್ಕಾರದ ನಿರ್ದೇಶನದಡಿ ಪರ್ವೀನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ