ಅಖಿಲೇಶ್ ಯಾದವ್ 
ದೇಶ

ಮತ್ತೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇನೆ: ಪಕ್ಷದ ಎಕ್ಸ್ ಪೋಸ್ಟ್ ಬಗ್ಗೆ ಅಖಿಲೇಶ್

ಪಾಠಕ್ ಅವರು ಅಂತಹ ಪೋಸ್ಟ್‌ಗೆ ಕಾರಣವಾದ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುತ್ತಾರೆ ಎಂದು ಆಶಿಸುವುದಾಗಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಲಖನೌ: ಸಮಾಜವಾದಿ ಪಕ್ಷದ ಅಧಿಕೃತ 'ಎಕ್ಸ್' ಖಾತೆಯಲ್ಲಿ ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಪೋಸ್ಟ್ ಹಾಕಿದ ಬಗ್ಗೆ ಪ್ರತಿಕ್ರಿಯಿಸಿದ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ತಮ್ಮ ಜನರಿಂದ ಮತ್ತೆ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಭಾನುವಾರ ಭರವಸೆ ನೀಡಿದ್ದಾರೆ.

ಆದರೆ ಪಾಠಕ್ ಅವರು ಅಂತಹ ಪೋಸ್ಟ್‌ಗೆ ಕಾರಣವಾದ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುತ್ತಾರೆ ಎಂದು ಆಶಿಸುವುದಾಗಿ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಹಿಂದಿಯಲ್ಲಿ ಮಾಡಲಾದ ಪೋಸ್ಟ್‌ನಲ್ಲಿ ಅಖಿಲೇಶ್ ಯಾದವ್ ಅವರು, 'ಯುಪಿ ಉಪಮುಖ್ಯಮಂತ್ರಿಯ ಕುರಿತಾದ ಕಾಮೆಂಟ್ ಅನ್ನು ಗಮನಿಸಿದ್ದು, ನಾವು ಪಕ್ಷದ ಮಟ್ಟದಲ್ಲಿ ವಿವರಣೆಯನ್ನು ಕೇಳಿದ್ದೇವೆ ಮತ್ತು ಇದು ಮತ್ತೆ ಸಂಭವಿಸುವುದಿಲ್ಲ ಎಂದು ನಾವು ಅವರಿಂದ ಭರವಸೆ ಪಡೆದಿದ್ದೇನೆ. 'ಸಮಾಜವಾದಿಗಳ ಡಿಎನ್‌ಎ' ಕುರಿತು ನಿಮ್ಮ(ಪಾಠಕ್) ಅಸಭ್ಯ ಹೇಳಿಕೆಯಿಂದ ಆಕ್ರೋಶಗೊಂಡು ಅವರು ಈ ರೀತಿ ಮಾಡಿದ್ದಾರೆ. ಆದರೆ ನೀವು ನಿರಂತರವಾಗಿ ನೀಡುವ ಈ ರೀತಿಯ ಹೇಳಿಕೆಗಳು ಸಹ ನಿಲ್ಲುತ್ತವೆ ಎಂದು ನಾವು ಭಾವಿಸುತ್ತೇವೆ' ಎಂದಿದ್ದಾರೆ.

'ಆರೋಗ್ಯ ಸಚಿವರಾಗಿ, ಯಾರೊಬ್ಬರ ಡಿಎನ್‌ಎ ಬಗ್ಗೆ ಕೊಳಕು ಮಾತನಾಡುವುದು, ಒಬ್ಬ ವ್ಯಕ್ತಿಯ ಮೇಲೆ ಆರೋಪ ಮಾಡುವುದು ಸರಿಯಲ್ಲ. ನಾವು ಶ್ರೀಕೃಷ್ಣನಿಗೆ ಸಂಬಂಧಿಸಿದ ಯದುವಂಶಿಗಳಾಗಿರುವುದರಿಂದ, ನಮ್ಮ ಡಿಎನ್‌ಎ ಮೇಲಿನ ನಿಮ್ಮ ದಾಳಿಯು ನಮಗೆ ಧಾರ್ಮಿಕವಾಗಿ ನೋವುಂಟು ಮಾಡುತ್ತದೆ' ಎಂದು ಅಖಿಲೇಶ್ ಯಾದವ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ರಾಜಕೀಯ ಮಾಡುವಾಗ ಪಾಠಕ್ ತಮ್ಮ ನೈತಿಕತೆಯನ್ನು ಮರೆಯಬಾರದು ಎಂದು ಅಖಿಲೇಶ್ ಯಾದವ್ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ