ಸಾಂದರ್ಭಿಕ ಚಿತ್ರ 
ದೇಶ

Jharkhand: 16 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಅಪ್ರಾಪ್ತ ಸೇರಿ ಐವರ ಬಂಧನ

ಸೋಮವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಂಗಳವಾರ ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಘಟನೆ ಮೇ 16 ರಂದು ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದುಮ್ಕಾ (ಜಾರ್ಖಂಡ್): ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಪ್ರಾಪ್ತ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ಸಂಜೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಂಗಳವಾರ ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಘಟನೆ ಮೇ 16 ರಂದು ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 17 ರಂದು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮದುವೆ ಕಾರ್ಯಕ್ರಮಕ್ಕಾಗಿ ಸಂಬಂಧಿಕರ ಮನೆಗೆ ಹೋಗಿದ್ದೆ. ಅಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ತನ್ನನ್ನು ಬಲವಂತವಾಗಿ ನಿರ್ಜನ ಸ್ಥಳಕ್ಕೆ ಕರೆದೊಯ್ದನು. ಅಲ್ಲಿ ಆ ವ್ಯಕ್ತಿ ಮತ್ತು ಇತರ ನಾಲ್ವರು ಸಹಚರರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

'ಎಫ್‌ಐಆರ್ ಆಧರಿಸಿ, ತಂಡವನ್ನು ರಚಿಸಲಾಗಿದ್ದು, ಸೋಮವಾರ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ಸಹ ನಡೆಸಲಾಗಿದೆ' ಎಂದು ಮುಫಾಸಿಲ್ ಪೊಲೀಸ್ ಠಾಣೆಯ ಉಸ್ತುವಾರಿ ಸತ್ಯಂ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್