ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ನಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ವಸತಿ ಕಟ್ಟಡದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.
ಇದಕ್ಕೂ ಮೊದಲು, ಕಲ್ಯಾಣ್ ಪೂರ್ವದ ಮಂಗಳರಾಘೋ ನಗರ ಪ್ರದೇಶದ ಸಪ್ತಶೃಂಗಿ ಕಟ್ಟಡದ ಅವಶೇಷಗಳಡಿ ಆರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು.
ಕಟ್ಟಡದ ಎರಡನೇ ಮಹಡಿಯ ಸ್ಲ್ಯಾಬ್ ಕುಸಿದು ಕೆಲವು ನಿವಾಸಿಗಳು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೇಳಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯವಿದ್ದರೆ, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುವುದು. ರಾಜ್ಯ ಸರ್ಕಾರ ಶೀಘ್ರದಲ್ಲೇ ಈ ಮೃತರ ಕುಟುಂಬ ಸದಸ್ಯರಿಗೆ ಆರ್ಥಿಕ ಸಹಾಯ ಘೋಷಿಸುತ್ತದೆ" ಎಂದು ಶಿಂಧೆ ತಿಳಿಸಿದ್ದಾರೆ.