ಸಾಂದರ್ಭಿಕ ಚಿತ್ರ 
ದೇಶ

Chhattisgarh: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ; ಎನ್‌ಕೌಂಟರ್‌ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧ ಹುತಾತ್ಮ

ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು (70) ಸೇರಿದಂತೆ ಕನಿಷ್ಠ 27 ನಕ್ಸಲರು ಸಾವಿಗೀಡಾಗಿದ್ದಾರೆ.

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಯೋಧ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಸಂಜೆ ದಟ್ಟ ಅರಣ್ಯದ ಅಭುಜ್‌ಮದ್ ಪ್ರದೇಶದಲ್ಲಿ ಮಾವೋವಾದಿಗಳೊಂದಿಗೆ ನಡೆದ ಪ್ರಮುಖ ಎನ್‌ಕೌಂಟರ್ ನಂತರ ಭದ್ರತಾ ಸಿಬ್ಬಂದಿ ಹಿಂತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾರಾಯಣಪುರ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡುಗಳಲ್ಲಿ ನಡೆದ ಈ ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು (70) ಸೇರಿದಂತೆ ಕನಿಷ್ಠ 27 ನಕ್ಸಲರು ಸಾವಿಗೀಡಾಗಿದ್ದಾರೆ.

ಎನ್‌ಕೌಂಟರ್‌ನಿಂದ ಹಿಂದಿರುಗುತ್ತಿದ್ದ ವೇಳೆ ಬಿಜಾಪುರ ಡಿಆರ್‌ಜಿಗೆ ಸೇರಿದ ಯೋದ ರಮೇಶ್ ಹೆಮ್ಲಾ ಎಂಬುವವರು ಒತ್ತಡ-ಸಕ್ರಿಯಗೊಳಿಸಿದ ಐಇಡಿ ಮೇಲೆ ಹೆಜ್ಜೆ ಇಟ್ಟಿದ್ದಾರೆ. ಇದರಿಂದಾಗಿ ಸ್ಫೋಟ ಸಂಭವಿಸಿ, ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಡಿಆರ್‌ಜಿ ಸದಸ್ಯ ಖೋಟ್ಲುರಾಮ್ ಕೊರ್ರಂ ಬಲಿಯಾಗಿದ್ದಾನೆ. ಕೊರ್ರಂ ನಾರಾಯಣಪುರದ ಓರ್ಚಾ ಪೊಲೀಸ್ ಠಾಣೆ ಪ್ರದೇಶದ ಭಟ್ಬೇಡ ಗ್ರಾಮದ ನಿವಾಸಿ.

ಗುರುವಾರ ಮಧ್ಯಾಹ್ನ 12 ಗಂಟೆಗೆ ನಾರಾಯಣಪುರದ ಪೊಲೀಸ್ ಲೈನ್ಸ್‌ನಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಮಾಲಾರ್ಪಣೆ ಸಮಾರಂಭ ನಡೆಯಲಿದ್ದು, ನಂತರ ಅವರ ಶವಗಳನ್ನು ಅವರವರ ಊರುಗಳಿಗೆ ಕಳುಹಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್