ದೇಶ

ಕೇರಳದಲ್ಲಿ ಮಳೆಯ ರೌದ್ರನರ್ತನ: ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳ, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದ್ದು ಕೇರಳದಾದ್ಯಂತ ಭಾರೀ ಮಳೆಯಾಗುತ್ತಿದೆ. 16 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕೇರಳಕ್ಕೆ ಮುಂಗಾರು ಮಳೆ ಅವಧಿಗೂ ಮುನ್ನವೇ ಆಗಮಿಸಿದೆ. 2009ರ ನಂತರ ಮೊದಲ ಬಾರಿಗೆ, ಮಾನ್ಸೂನ್ ಭಾರತದ ಮುಖ್ಯ ಭೂಭಾಗವನ್ನು ಇಷ್ಟು ಬೇಗ ತಲುಪಿದೆ. ಈ ಮಾಹಿತಿಯನ್ನು ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳ, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ವೇಳೆಗೆ ಕೇರಳವನ್ನು ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ. ಅಕ್ಟೋಬರ್ 15 ರ ಹೊತ್ತಿಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ.

IMD ದತ್ತಾಂಶದ ಪ್ರಕಾರ, ಮಾನ್ಸೂನ್ ಕಳೆದ ವರ್ಷ ಮೇ 30 ರಂದು, 2023 ರಲ್ಲಿ ಜೂನ್ 8 ರಂದು, 2022 ರಲ್ಲಿ ಮೇ 29 ರಂದು, 2021 ರಲ್ಲಿ ಜೂನ್ 3 ರಂದು, 2020 ರಲ್ಲಿ ಜೂನ್ 1 ರಂದು, 2019 ರಲ್ಲಿ ಜೂನ್ 8 ರಂದು ಮತ್ತು 2018 ರಲ್ಲಿ ಮೇ 29 ರಂದು ದಕ್ಷಿಣ ರಾಜ್ಯಕ್ಕೆ ಆಗಮಿಸಿತು.

ಕೇರಳಕ್ಕೆ ಮುಂಗಾರು ಬೇಗ ಅಥವಾ ತಡವಾಗಿ ಬಂದರೂ ಅದು ದೇಶದ ಇತರ ಭಾಗಗಳನ್ನು ಅದೇ ರೀತಿಯಲ್ಲಿ ತಲುಪುತ್ತದೆ ಎಂದು ಅರ್ಥವಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ದೊಡ್ಡ ಪ್ರಮಾಣದ ವ್ಯತ್ಯಾಸಕ್ಕೆ ಒಳಪಟ್ಟಿರುತ್ತದೆ ಮತ್ತು ಜಾಗತಿಕ, ಪ್ರಾದೇಶಿಕ ಮತ್ತು ಸ್ಥಳೀಯ ಅಂಶಗಳಿಂದ ನಿರ್ಧರಿಸಲ್ಪಡುತ್ತದೆ. ಈ ವರ್ಷದ ಮಾನ್ಸೂನ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಏಪ್ರಿಲ್‌ನಲ್ಲಿ ಐಎಂಡಿ ಮುನ್ಸೂಚನೆ ನೀಡಿತ್ತು. ಇದು ಎಲ್ ನಿನೊ ಪರಿಸ್ಥಿತಿಯ ಸಾಧ್ಯತೆಯನ್ನು ತಳ್ಳಿಹಾಕಿತು. ಎಲ್ ನಿನೊ ವ್ಯವಸ್ಥೆಯು ಭಾರತೀಯ ಉಪಖಂಡದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಗೆ ಕಾರಣವಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT