ಸಾಂದರ್ಭಿಕ ಚಿತ್ರ  
ದೇಶ

ಜಾರ್ಖಂಡ್‌: ಪ್ರಮುಖ ನಾಯಕ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆ

ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದಾರೆ. ಪೊಲೀಸರು ಅವರ ಶವಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪಲಮು ಡಿಐಜಿ ವೈಎಸ್ ರಮೇಶ್ ತಿಳಿಸಿದ್ದಾರೆ.

ಲತೇಹಾರ್(ಜಾರ್ಖಂಡ್): ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜಾರ್ಖಂಡ್ ಜನ ಮುಕ್ತಿ ಪರಿಷತ್ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿದಂತೆ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಾರ್ಖಂಡ್ ಪೊಲೀಸರು ಜಂಟಿಯಾಗಿ ಲತೇಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ನಡೆಸಿದ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಮಾವೋವಾದಿ ವಿಭಜನೆ ಗುಂಪಿನ ಜೆಜೆಎಂಪಿ ಮುಖ್ಯಸ್ಥ ಲೋಹ್ರಾ ಮತ್ತು ಅವರ ಸಹಚರರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದಾರೆ. ಪೊಲೀಸರು ಅವರ ಶವಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪಲಮು ಡಿಐಜಿ ವೈಎಸ್ ರಮೇಶ್ ತಿಳಿಸಿದ್ದಾರೆ.

ಪಪ್ಪು ಲೋಹ್ರಾ ಮತ್ತು ಇನ್ನೂ ಗುರುತು ಪತ್ತೆಯಾಗದ ಇನ್ನೊಬ್ಬ ವ್ಯಕ್ತಿಯ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡಿದ್ದ ಗುಂಪಿನ ಒಬ್ಬ ಮಾವೋವಾದಿಯನ್ನು ಬಂಧಿಸಲಾಗಿದ್ದು, ಅವರಿಂದ ಐಎನ್‌ಎಸ್‌ಎಎಸ್ ರೈಫಲ್ ನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್