ಅಪಹರಣಕ್ಕೀಡಾದ ಮದುಮಗ 
ದೇಶ

Groom kidnap: ಮದುವೆ ಮಂಟಪದಿಂದ ಮದುಮಗನನ್ನೇ ಅಪಹರಿಸಿದ ನೃತ್ಯಗಾರ್ತಿಯರು!

ಮದುವೆ ಮನೆಯಲ್ಲಿ ಅತಿಥಿಗಳ ಮನರಂಜನೆಗೆಂದು ಕರೆಸಲಾಗಿದ್ದ ನೃತ್ಯಗಾರ್ತಿಯರೇ ಮದುಮಗನನ್ನು ಅಪಹರಣ ಮಾಡಿದ್ದಾರೆ.

ಪಾಟ್ನಾ: ವಿಚಿತ್ರ ಘಟನೆಯೊಂದರಲ್ಲಿ ಮದುವೆಗೆ ನೃತ್ಯ ಮಾಡಲು ಬಂದಿದ್ದ ಡ್ಯಾನ್ಸರ್ ಗಳೇ ಮದುಮಗನನ್ನು ಅಪಹರಣ ಮಾಡಿರುವ ವಿಚಿತ್ರ ಘಟನೆ ಬಿಹಾರದಲ್ಲಿ ನಡೆದಿದೆ.

ಹೌದು.. ಮದುವೆ ಮನೆಯಲ್ಲಿ ಅತಿಥಿಗಳ ಮನರಂಜನೆಗೆಂದು ಕರೆಸಲಾಗಿದ್ದ ನೃತ್ಯಗಾರ್ತಿಯರೇ ಮದುಮಗನನ್ನು ಅಪಹರಣ ಮಾಡಿದ್ದಾರೆ. ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಮದುವೆಗಾಗಿ ನೇಮಿಸಿಕೊಳ್ಳುವ ನೃತ್ಯ ತಂಡವಾದ ಲೌಂಡಾ ನಾಚ್​ನ ಸದಸ್ಯರು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿ ವರನನ್ನು ಅಪಹರಿಸಿದೆ ಎಂದು ಆರೋಪಿಸಲಾಗಿದೆ.

ಆಗಿದ್ದೇನು?

ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ ಸಂದರ್ಭದಲ್ಲಿ ಯಾವುದೋ ವಿಚಾರಕ್ಕೆ ಗಲಾಟೆ ಶುರುವಾಗಿತ್ತು. ನೋಡ ನೋಡುತ್ತಲೇ ಅದು ಹಿಂಸಾತ್ಮಕ ಘರ್ಷಣೆಯಾಗಿ ಮಾರ್ಪಟ್ಟಿತ್ತು. ಪರಿಸ್ಥಿತಿ ನಿಯಂತ್ರಣ ತಪ್ಪಿ, ಆ ತಂಡದವರು ಮದುವೆ ಮಂಟಪದೊಳಗೆ ನುಗ್ಗಿ, ವಧು ಮತ್ತು ಆಕೆಯ ಕುಟುಂಬ ಸೇರಿದಂತೆ ಅತಿಥಿಗಳ ಮೇಲೆ ದಾಳಿ ಮಾಡಿದರು.

ಇದ್ದಕ್ಕಿದ್ದಂತೆ ಅವರು ಮನೆಗೆ ನುಗ್ಗಿ ವರನನ್ನು ಹೊಡೆಯಲು ಪ್ರಾರಂಭಿಸಿದರು. ಬಳಿಕ ಅವರ ವರನನ್ನು ಅಪಹರಿಸಿದರು ಎಂದು ಸಂಬಂಧಿಕರೊಬ್ಬರು ಹೇಳಿದ್ದಾರೆ.

ಆಭರಣ-ಹಣ ಲೂಟಿ

ಇದೇ ವೇಳೆ ಅಪಹರಣಕಾರರು ಮನೆಯೊಳಗಿನಿಂದ ಆಭರಣಗಳು ಮತ್ತು ಬೆಲೆಬಾಳುವ ವಸ್ತುಗಳನ್ನು ಸಹ ದೋಚಿದರು ಎಂದು ವಧುವಿನ ತಾಯಿ ವಿದ್ಯಾವತಿ ದೇವಿ ಹೇಳಿದ್ದಾರೆ. ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಬಂದರು. ಆದರೆ ಅಷ್ಟರಲ್ಲಾಗಲೇ ಅಪಹರಣಕಾರರು ಪರಾರಿಯಾಗಿದ್ದರು.

ಅಪಹರಣಕಾರರ ಬಂಧನ

ಆದಾಗ್ಯೂ, ಪೊಲೀಸರು ತೀವ್ರ ಹುಡುಕಾಟ ನಡೆಸಿ 7 ಗಂಟೆಗಳಲ್ಲಿ ವರನನ್ನು ಪತ್ತೆಹಚ್ಚಿದರು. ಅಪಹರಣಕಾರರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಯಿತು. ಪೊಲೀಸ್ ವರಿಷ್ಠಾಧಿಕಾರಿ ಅವಧೇಶ್ ದೀಕ್ಷಿತ್ ಮಾತನಾಡಿ, ಹಣಕಾಸಿನ ವಿವಾದವೇ ಈ ಕೃತ್ಯಕ್ಕೆ ಕಾರಣ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT