NDA ಸಭೆ 
ದೇಶ

NDA ಸಭೆಯಲ್ಲಿ ಪ್ರಧಾನಿ ಮೋದಿ ನಾಯಕತ್ವ ಶ್ಲಾಘಿಸುವ ನಿರ್ಣಯ ಅಂಗೀಕಾರ

ನಿರ್ಣಯ ಪ್ರಸ್ತಾಪಿಸಿದ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಆಪರೇಷನ್ ಸಿಂಧೂರ್ ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯಲ್ಲಿ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಧೈರ್ಯಶಾಲಿ ನಾಯಕತ್ವವನ್ನು ಶ್ಲಾಘಿಸುವ ನಿರ್ಣಯ ಅಂಗೀಕರಿಸಲಾಯಿತು.

ನಿರ್ಣಯ ಪ್ರಸ್ತಾಪಿಸಿದ ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಆಪರೇಷನ್ ಸಿಂಧೂರ್ ಭಾರತೀಯರ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಾ, ಪ್ರಧಾನಿ ಯಾವಾಗಲೂ ಸಶಸ್ತ್ರ ಪಡೆಗಳನ್ನು ಬೆಂಬಲಿಸಿದ್ದಾರೆ ಮತ್ತು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುತ್ತಿದ್ದವರಿಗೆ ತಕ್ಕ ಉತ್ತರ ನೀಡಿದೆ ಎಂದು ಎನ್ ಡಿಎ ನಾಯಕರು ಹೇಳಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಜೆ ಪಿ ನಡ್ಡಾ ಸಹ ಎನ್ ಡಿಎನ ಒಂದು ದಿನದ ಸಮಾವೇಶದಲ್ಲಿ ಭಾಗವಹಿಸಿದ್ದರು. ಅಲ್ಲದೆ ಸುಮಾರು 19 ಮುಖ್ಯಮಂತ್ರಿಗಳು ಮತ್ತು ಅನೇಕ ಉಪಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ವಾರ್ಷಿಕೋತ್ಸವ, ಜಾತಿ ಗಣತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ