ಸಾಂದರ್ಭಿಕ ಚಿತ್ರ 
ದೇಶ

ಗಾಜಿಯಾಬಾದ್‌: ವಾಂಟೆಡ್ ಕ್ರಿಮಿನಲ್ ಬಂಧನ ವೇಳೆ ಗುಂಡಿನ ದಾಳಿ; ಕಾನ್‌ಸ್ಟೆಬಲ್ ಸಾವು, ನಾಲ್ವರು ಅಧಿಕಾರಿಗಳಿಗೆ ಗಾಯ

ಪೊಲೀಸ್ ವಕ್ತಾರರ ಪ್ರಕಾರ, ತಂಡವು ಖಾದಿರ್ ನನ್ನು ಯಶಸ್ವಿಯಾಗಿ ಪತ್ತೆಹಚ್ಚಿತು. ಆದರೆ ಖಾದಿರ್ ಮತ್ತು ಆತನ ಸಹಚರರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿ, ಕಲ್ಲು ಎಸೆದಿದ್ದಾರೆ.

ನೋಯ್ಡಾ: ಗಾಜಿಯಾಬಾದ್‌ನ ಮಸ್ಸೂರಿ ಪ್ರದೇಶದಲ್ಲಿ ತಡರಾತ್ರಿ ನಡೆದ ದಾಳಿಯಲ್ಲಿ ನೋಯ್ಡಾದ 32 ವರ್ಷದ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತ ಕಾನ್‌ಸ್ಟೆಬಲ್ ಸೌರಭ್ ಅವರು, ನೋಯ್ಡಾದ ಹಂತ-III ಪೊಲೀಸ್ ಠಾಣೆಯ ತಂಡದಲ್ಲಿ ಒಬ್ಬರಾಗಿದ್ದರು. 16 ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದ ಅಪರಾಧಿ ಖಾದಿರ್ ನನ್ನು ಬಂಧಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಹಂತ-III ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ನಂತರ ಈ ಕಾರ್ಯಾಚರಣೆ ನಡೆದಿದೆ.

ಪೊಲೀಸ್ ವಕ್ತಾರರ ಪ್ರಕಾರ, ತಂಡವು ಖಾದಿರ್ ನನ್ನು ಯಶಸ್ವಿಯಾಗಿ ಪತ್ತೆಹಚ್ಚಿತು. ಆದರೆ ಖಾದಿರ್ ಮತ್ತು ಆತನ ಸಹಚರರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿ, ಕಲ್ಲು ಎಸೆದಿದ್ದಾರೆ. ಈ ವೇಳೆ ಕಾನ್‌ಸ್ಟೆಬಲ್ ಸೌರಭ್ ತಲೆಗೆ ಗುಂಡು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೌರಭ್ ಅವರನ್ನು ತಕ್ಷಣ ಯಶೋದಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಹಂತ-III ಠಾಣೆಯಲ್ಲಿ ನಿಯೋಜಿಸಲಾಗಿದ್ದ ಸೌರಭ್ ಅವರು ಶಾಮ್ಲಿ ಮೂಲದವರು. ಘಟನೆಯಲ್ಲಿ ಸಬ್ ಇನ್ಸ್‌ಪೆಕ್ಟರ್‌ಗಳಾದ ಸಚಿನ್ ರಥಿ, ಉದಿತ್ ಸಿಂಗ್, ಸುಮಿತ್ ಮತ್ತು ನಿಖಿಲ್ ಗಾಯಗೊಂಡಿದ್ದಾರೆ.

ಪ್ರಸ್ತುತ ಬಂಧನದಲ್ಲಿರುವ ಖಾದಿರ್ ವಿರುದ್ಧ 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?