ಕಮಲ್ ಹಾಸನ್ 
ದೇಶ

ನಟ ಕಮಲ್ ಹಾಸನ್ ರಾಜ್ಯಸಭಾ ಅಭ್ಯರ್ಥಿ

"ಮಕ್ಕಳ್ ನೀಧಿ ಮೈಯಂ ಪಕ್ಷದಿಂದ ಕಮಲ್ ಹಾಸನ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಲು ನಾವು ನಿರ್ಣಯ ಅಂಗೀಕರಿಸಿದ್ದೇವೆ"

ಚೆನ್ನೈ: ಡಿಎಂಕೆ ಪಕ್ಷವು ಮಕ್ಕಳ್ ನೀಧಿ ಮೈಯಂ ಪಕ್ಷಕ್ಕೆ ಒಂದು ರಾಜ್ಯಸಭಾ ಸ್ಥಾನವನ್ನು ಹಂಚಿಕೆ ಮಾಡಿದ್ದು, ಅದರ ಸಂಸ್ಥಾಪಕ ಮತ್ತು ನಟ ಕಮಲ್ ಹಾಸನ್ ಅವರನ್ನು ಸಂಸತ್ತಿನ ಮೇಲ್ಮನೆಗೆ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ.

"ಮಕ್ಕಳ್ ನೀಧಿ ಮೈಯಂ ಪಕ್ಷದಿಂದ ಕಮಲ್ ಹಾಸನ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಲು ನಾವು ನಿರ್ಣಯ ಅಂಗೀಕರಿಸಿದ್ದೇವೆ" ಎಂದು ಮಕ್ಕಳ್ ನೀಧಿ ಮೈಯಂ(ಎಂಎನ್‌ಎಂ) ನಾಯಕ ಮುರಳಿ ಅಪ್ಪಾಸ್ ಅವರು ಹೇಳಿದ್ದಾರೆ.

ಇದಲ್ಲದೆ, ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಆಡಳಿತಾರೂಢ ಡಿಎಂಕೆ ಒಕ್ಕೂಟವು ತನ್ನ ಮೂವರು ಅಭ್ಯರ್ಥಿಗಳನ್ನು ಹೆಸರಿಸಿದೆ.

ಡಿಎಂಕೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಸಲ್ಮಾ, ಅಡ್ವೊಕೇಟ್ ಪಿ ವಿಲ್ಸನ್ ಮತ್ತು ಎಸ್‌ಆರ್ ಶಿವಲಿಂಗಂ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳಾಗಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ, ರಾಜ್ಯಸಭಾ ಸ್ಥಾನವನ್ನು ಪಡೆಯಲು ಪ್ರತಿ ಅಭ್ಯರ್ಥಿಗೆ ಕನಿಷ್ಠ 34 ಮತಗಳು ಬೇಕಾಗುತ್ತವೆ. 158 ಶಾಸಕರನ್ನು ಹೊಂದಿರುವ ಡಿಎಂಕೆ ನೇತೃತ್ವದ ಇಂಡಿಯಾ ಬಣ(ಡಿಎಂಕೆ: 133, ಕಾಂಗ್ರೆಸ್: 17, ವಿಸಿಕೆ: 4, ಸಿಪಿಐ: 2, ಸಿಪಿಎಂ: 2) ನಾಲ್ಕು ಸ್ಥಾನಗಳನ್ನು ಆರಾಮವಾಗಿ ಗೆಲ್ಲುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT