ಅಮರನಾಥ ಯಾತ್ರೆ ಸಾಂದರ್ಭಿಕ ಚಿತ್ರ 
ದೇಶ

ಅಮರನಾಥ ಯಾತ್ರೆ ಭದ್ರತೆಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 42,000 ಸಿಬ್ಬಂದಿ ನಿಯೋಜನೆ!

580 ತುಕಡಿಗಳ ಪೈಕಿ 424 ತುಕಡಿಗಳನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಗಾಗಿ 42,000 ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿಯನ್ನೊಳಗೊಂಡ 580 ತುಕಡಿಗಳ ನಿಯೋಜನೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.

580 ತುಕಡಿಗಳ ಪೈಕಿ 424 ತುಕಡಿಗಳನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಕಳುಹಿಸಲಾಗುತ್ತಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ಸ್ಥಳಾಂತರಗೊಂಡ ಸುಮಾರು 80 ತುಕಡಿಗಳು ಸೇರಿದಂತೆ ಉಳಿದವುಗಳನ್ನು ಯಾತ್ರಾ ಮಾರ್ಗ, ಯಾತ್ರಿಕರು ಮತ್ತು ಶ್ರೀನಗರ ಮತ್ತಿತರ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗುವುದು ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಜೂನ್ ಎರಡನೇ ವಾರದೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯಕ್ಕೆ ನಿಯೋಜನೆಯಾಗುವಂತೆ ಕೇಂದ್ರ ಗೃಹ ಸಚಿವಾಲಯ ಈ ಪಡೆಗಳಿಗೆ ಆದೇಶಿಸಿದೆ ಎಂದು ಅಧಿಕಾರಿಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಅಮರನಾಥ ಯಾತ್ರೆಯು ಜುಲೈ 3 ರಂದು ಪ್ರಾರಂಭವಾಗಿ ಆಗಸ್ಟ್ 9 ರಂದು ಕೊನೆಗೊಳ್ಳಲಿದೆ.

ಏಪ್ರಿಲ್ 22 ರ ಪಹಲ್ಗಾಮ್ ಉಗ್ರರ ದಾಳಿಯಲ್ಲಿ 26 ಜನರು, ಹೆಚ್ಚಾಗಿ ಪ್ರವಾಸಿಗರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಈ ಬಾರಿಯ ಅಮರನಾಥ ಯಾತ್ರೆಗೆ ಸುಮಾರು 580 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ನಿಯೋಜಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

ಇದರಲ್ಲಿ ಈಗಾಗಲೇ 150-160 ತುಕಡಿಗಳು ಕೇಂದ್ರಾಡಳಿತ ಪ್ರದೇಶದಲ್ಲಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾ ಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ