ಪ್ರಧಾನಿ ಮೋದಿ, ಸಿಎಂ ಮಮತಾ ಬ್ಯಾನರ್ಜಿ 
ದೇಶ

ನಿಮ್ಮ ಸವಾಲು ಸ್ವೀಕರಿಸಿದ್ದೇವೆ, ತಾಕತ್ ಇದ್ದರೆ ಚುನಾವಣೆ ಘೋಷಿಸಿ: ಮೋದಿಗೆ ಮಮತಾ ಪ್ರತಿ ಸವಾಲು; Video

ಮೋದಿ ಜಿ ಅವರ ಸಮ್ಮುಖದಲ್ಲಿ ಅವರ ಸಚಿವರು ಆಪರೇಷನ್ ಸಿಂಧೂರ್ ನಂತೆ ಆಪರೇಷನ್ ಬಂಗಾಳ ಮಾಡುವುದಾಗಿ ಹೇಳಿದರು. ನಾನು ಅವರಿಗೆ ಸವಾಲು ಹಾಕುತ್ತೇನೆ....

ಕೋಲ್ಕತ್ತಾ: "ವಿರೋಧ ಪಕ್ಷಗಳು ದೇಶವನ್ನು ಪ್ರತಿನಿಧಿಸುತ್ತಿರುವಾಗ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೇಳಿದ್ದನ್ನು ಕೇಳಿ ನಮಗೆ ಆಘಾತ ಮಾತ್ರವಲ್ಲದೆ ತುಂಬಾ ದುಃಖವಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.

"ಮೋದಿ ಜಿ ಅವರ ಸಮ್ಮುಖದಲ್ಲಿ ಅವರ ಸಚಿವರು ಆಪರೇಷನ್ ಸಿಂಧೂರ್ ನಂತೆ ಆಪರೇಷನ್ ಬಂಗಾಳ ಮಾಡುವುದಾಗಿ ಹೇಳಿದರು. ನಾನು ಅವರಿಗೆ ಸವಾಲು ಹಾಕುತ್ತೇನೆ - ಅವರಿಗೆ ತಾಕತ್ ಇದ್ದರೆ, ನಾಳೆಯೇ ಚುನಾವಣೆ ಘೋಷಿಸಲಿ. ನಾವು ಎದರಿಸಲು ಸಿದ್ಧರಿದ್ದೇವೆ ಮತ್ತು ಬಂಗಾಳ ನಿಮ್ಮ ಸವಾಲನ್ನು ಸ್ವೀಕರಿಸಲು ಸಿದ್ಧವಾಗಿದೆ. ಆದರೆ ದಯವಿಟ್ಟು ನೆನಪಿಡಿ, ಸಮಯ ಒಂದೇ ರೀತಿ ಇರುವುದಿಲ್ಲ. ನೀವು ಸಮಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

"ನಮ್ಮ ಪ್ರತಿನಿಧಿ ಅಭಿಷೇಕ್ ಬ್ಯಾನರ್ಜಿ ಕೂಡ ವಿರೋಧ ಪಕ್ಷಗಳ ಸಂಸದರ ತಂಡದಲ್ಲಿದ್ದಾರೆ ಮತ್ತು ಅವರು ಪ್ರತಿದಿನ ಭಯೋತ್ಪಾದನೆಯ ವಿರುದ್ಧ ಮಾತನಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ನೀವು ಪ್ರಧಾನಿಯಾಗಿ ಅಲ್ಲ, ಬಿಜೆಪಿ ನಾಯಕರಾಗಿ ಬಂಗಾಳದಲ್ಲಿ ನಮ್ಮ ಸರ್ಕಾರವನ್ನು ಟೀಕಿಸುತ್ತಿದ್ದೀರಿ. ನಮ್ಮ ಸರ್ಕಾರ ಭಯೋತ್ಪಾದನೆಯ ವಿರುದ್ಧ ನಿಮಗೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ. ಆದರೂ ನೀವು ನಮ್ಮ ಸರ್ಕಾರವನ್ನು ವಿನಾಕಾರಣ ದೂಷಿಸುತ್ತಿದ್ದೀರಿ” ಎಂದು ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿವೆ.

ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಹಿಂಸಾಚಾರ, ಕಾನೂನು ಸುವ್ಯವಸ್ಥೆ ಸರಿ ಇಲ್ಲ, ಮಹಿಳೆಯರಲ್ಲಿ ಅಭದ್ರತೆ, ನಿರುದ್ಯೋಗ, ಭ್ರಷ್ಟಾಚಾರದಿಂದ ಬಳಲುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತ ಪಕ್ಷದ ಸ್ವಾರ್ಥ ರಾಜಕೀಯವು ಬಡ ಜನರ ನ್ಯಾಯಯುತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಪ್ರಧಾನಿ ಮೋದಿ ಇಂದು ದೀದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ