ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಅವರು ಪ್ರಮಾಣ ವಚನ ಬೋಧಿಸಿದರು. 
ದೇಶ

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಅಂಜಾರಿಯಾ, ಬಿಷ್ಣೋಯ್, ಚಂದೂರ್ಕರ್ ಪ್ರಮಾಣ ವಚನ ಸ್ವೀಕಾರ

ಮೂವರು ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರದೊಂದಿಗೆ ಒಟ್ಟು 34 ನ್ಯಾಯಮೂರ್ತಿಗಳ ಸಂಖ್ಯಾಬಲದ ಸರ್ವೋಚ್ಚ ನ್ಯಾಯಾಲಯ ಸಂಪೂರ್ಣ ಸದಸ್ಯರೊಂದಿಗೆ ಕಾರ್ಯನಿರ್ವಹಿಸಲಿದೆ.

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಎನ್‌.ವಿ.ಅಂಜಾರಿಯಾ, ವಿಜಯ್‌ ಬಿಷ್ಣೋಯ್‌ ಹಾಗೂ ಎ.ಎಸ್‌.ಚಂದೂರ್ಕರ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮೂವರು ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದರು.

ಮೂವರು ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರದೊಂದಿಗೆ ಒಟ್ಟು 34 ನ್ಯಾಯಮೂರ್ತಿಗಳ ಸಂಖ್ಯಾಬಲದ ಸರ್ವೋಚ್ಚ ನ್ಯಾಯಾಲಯ ಸಂಪೂರ್ಣ ಸದಸ್ಯರೊಂದಿಗೆ ಕಾರ್ಯನಿರ್ವಹಿಸಲಿದೆ.

ಸಿಜೆಐಯಾಗಿದ್ದ ಸಂಜೀವ್‌ ಖನ್ನಾ, ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ಬೆಲಾ ತ್ರಿವೇದಿ ಅವರು ಈಚಗೆ ನಿವೃತ್ತಿ ಹೊಂದಿದ್ದರಿಂದ ಮೂರು ಹುದ್ದೆಗಳು‌ ಖಾಲಿ ಉಳಿದಿದ್ದವು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಕೊಲಿಜಿಯಂ ಮೇ 26ರಂದು ಮೂವರು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ಗೆ ಪದೋನ್ನತಿಗೊಳಿಸುವಂತೆ ಶಿಫಾರಸು ಮಾಡಿತ್ತು.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಅವರ ಮಾತೃ ಹೈಕೋರ್ಟ್‌ ಗುಜರಾತ್‌ ಆಗಿದ್ದು, ಗುವಾಹಟಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಜಯ್‌ ಬಿಷ್ಣೋಯ್‌ ಅವರ ಮಾತೃ ಹೈಕೋರ್ಟ್‌ ರಾಜಸ್ಥಾನ ಹೈಕೋರ್ಟ್ ಆಗಿದೆ. ನ್ಯಾ. ಚಂದೂರ್ಕರ್‌ ಅವರ ಮಾತೃ ಹೈಕೋರ್ಟ್‌ ಬಾಂಬೆ ಹೈಕೋರ್ಟ್ ಆಗಿದೆ.

2011ರ ನವೆಂಬರ್‌ 21ರಂದು ನ್ಯಾ. ಅಂಜಾರಿಯಾ ಅವರು ಗುಜರಾತ್‌ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು, 2013ರ ಸೆಪ್ಟೆಂಬರ್‌ 6ರಂದು ಕಾಯಂಗೊಂಡಿದ್ದರು. 2024ರ ಫೆಬ್ರವರಿ 25ರಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿಗೊಂಡಿದ್ದರು.

ನ್ಯಾಯಮೂರ್ತಿ ಬಿಷ್ಣೋಯ್‌ ಅವರು 1989ರ ಜುಲೈ 8ರಂದು ವಕೀಲರಾಗಿ ನೋಂದಣಿ ಮಾಡಿಸಿದ್ದು, ರಾಜಸ್ಥಾನ ಹೈಕೋರ್ಟ್‌ ಮತ್ತು ಜೋಧಪುರದ ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ ಪ್ರಾಕ್ಟೀಸ್‌ ಮಾಡಿದ್ದಾರೆ. ಸಿವಿಲ್‌, ಕ್ರಿಮಿನಲ್‌, ಸಾಂವಿಧಾನಿಕ, ಸೇವಾ ಮತ್ತು ಚುನಾವಣಾ ಪ್ರಕರಣಗಳನ್ನು ನಡೆಸಿದ್ದಾರೆ.

ನ್ಯಾ. ಚಂದೂರ್ಕರ್‌ ಅವರು 1988ರ ಜುಲೈ 21ರಂದು ವಕೀಲರಾಗಿ ನೋಂದಣಿಯಾಗಿದ್ದು, ಮುಂಬೈನ ಹಿರಿಯ ವಕೀಲ ಬಿ ಎನ್‌ ನಾಯ್ಕ್‌ ಅವರ ಚೇಂಬರ್‌ನಲ್ಲಿ ವೃತ್ತಿ ಬದುಕು ಆರಂಭಿಸಿದ್ದರು. ಆನಂತರ ನ್ಯಾಯಮೂರ್ತಿಯಾಗಿ ಪದೋನ್ನತಿಗೊಂಡಿದ್ದರು. 1992ರಲ್ಲಿ ನಾಗ್ಪುರ ಪೀಠಕ್ಕೆ ಪ್ರಾಕ್ಟೀಸ್‌ ವರ್ಗಾಯಿಸಿಕೊಂಡಿದ್ದ ನ್ಯಾ. ಚಂದೂರ್ಕರ್‌ ಅವರು ಹಲವು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ: ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ, Sensex ಕುಸಿತ

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

SCROLL FOR NEXT