ಪ್ರಶಸ್ತಿ ವಿಜೇತರೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಬೆಂಗಳೂರಿನ ಬಾನು ಸೇರಿದಂತೆ 15 ನರ್ಸ್‌ಗಳಿಗೆ ರಾಷ್ಟ್ರಪತಿಗಳಿಂದ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ

ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರ್ಸಿಂಗ್ ವೃತ್ತಿಪರರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ನವದೆಹಲಿ: ನರ್ಸಿಂಗ್‌ನಲ್ಲಿ ಪಿಎಚ್‌ಡಿ ಪದವಿ ಪಡೆದಿರುವ, ಪಠ್ಯಪುಸ್ತಕಗಳನ್ನು ಬರೆದಿರುವ, ಹಲವಾರು ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವ, ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಸಹಾಯಕ ನರ್ಸಿಂಗ್ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿರುವ ಪ್ರತಿಭಾನ್ವಿತ ಶಿಕ್ಷಣ ತಜ್ಞ ಡಾ. ಬಾನು ಎಂ.ಆರ್ ಅವರು ಸೇರಿದಂತೆ 15 ನರ್ಸ್‌ಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ-2025 ಅನ್ನು ಶುಕ್ರವಾರ ಪ್ರದಾನ ಮಾಡಿದರು.

ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರ್ಸಿಂಗ್ ವೃತ್ತಿಪರರಿಗೆ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಅನುಕರಣೀಯ ನಾಯಕತ್ವ ಪ್ರದರ್ಶಿಸಿದ್ದಕ್ಕಾಗಿ ಮತ್ತು ಇತರ ನರ್ಸ್ ಗಳಿಗೆ ಮಾದರಿಯಾಗುವಂತ ಕೆಲಸ ಮಾಡಿದ ಡಾ. ಬಾನು ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಎನ್‌ಎಂ ಆಗಿ ವೃತ್ತಿ ಜೀವನ ಆರಂಭಿಸಿ, ನಿರ್ವಹಣಾ ಬೋಧಕಿ ಸ್ಥಾನಕ್ಕೇರಿ ಈ ವರ್ಷ ನಿವೃತ್ತಿಯಾದ ಆರೋಗ್ಯ ಶಿಕ್ಷಕಿ ವಲಿವೇಟಿ ಸುಭಾವತಿ ಅವರು ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಸ್ವೀಕರಿಸಿದರು.

ತಮಿಳುನಾಡಿನ ಶ್ರೀವಿಲ್ಲಿಪುತೂರು ಉಪ-ಜಿಲ್ಲಾ ಆಸ್ಪತ್ರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿರುವ ಕೆ ಅಲಮೇಲು ಮಂಗಯಾರ್ಕರಸಿ, ದೆಹಲಿಯ ಇಬ್ಬರು ಮತ್ತು ಪುದುಚೇರಿಯ ಒಬ್ಬರು ದಾದಿಯರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಅಂಡಮಾನ್ ಮತ್ತು ನಿಕೋಬಾರ್, ಲಕ್ಷದ್ವೀಪ, ದಾದರ್ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು, ಮಹಾರಾಷ್ಟ್ರ, ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ಮಿಜೋರಾಂ ಮತ್ತು ಪಶ್ಚಿಮ ಬಂಗಾಳದಿಂದ ತಲಾ ಒಬ್ಬರು ದಾದಿಯರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ದಾದಿಯರು ಮತ್ತು ನರ್ಸಿಂಗ್ ವೃತ್ತಿಪರರು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಳನ್ನು ಗುರುತಿಸುವ ಸಂಕೇತವಾಗಿ 1973 ರಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಈ ಪ್ರಶಸ್ತಿಯನ್ನು ಸ್ಥಾಪಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT