ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

70ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ.

ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಆವರೂ ಕೂಡ ಕನ್ನಡದಲ್ಲೇ ಪೋಸ್ಟ್ ಮಾಡಿದ್ದು, ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಹೇಳಿದ್ದಾರೆ.

ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸುವರ್ಣ ಕರ್ನಾಟಕ ವರ್ಷಚಾರಣೆಯನ್ನು ಜನೋತ್ಸವವಾಗಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೋಸ್ಟ್ ಮಾಡಿ, ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಕರ್ನಾಟಕವು ರಾಷ್ಟ್ರಕ್ಕೆ ಶ್ರೇಷ್ಠ ಸಮಾಜ ಸುಧಾರಕರು, ಲೇಖಕರು, ಸಂಗೀತಗಾರರು, ದಾರ್ಶನಿಕ ರಾಜರು, ಉದ್ಯಮಿಗಳು ಮತ್ತು ನವೋದ್ಯಮಗಳನ್ನು ನೀಡಿದೆ. ಸಂಸ್ಕೃತಿ ಮತ್ತು ನಾವೀನ್ಯತೆ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದಕ್ಕೆ ಇದು ಒಂದು ಉಜ್ವಲ ಉದಾಹರಣೆಯಾಗಿದೆ. ರಾಜ್ಯವು ಪ್ರಗತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಎತ್ತರಗಳನ್ನು ಏರಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿವಿಧ ಕ್ಷೇತ್ರಗಳ ಸಾಧಕರಿಗೆ 'ರಾಜ್ಯೋತ್ಸವ ಪ್ರಶಸ್ತಿ' ಪ್ರದಾನ; ಕನ್ನಡ ಪರ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್!

ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ; ಇಬ್ಬರ ಸ್ಥಿತಿ ಗಂಭೀರ!

ಸಿಎಂಎಸ್-03 ಉಪಗ್ರಹ: ಭಾರತೀಯ ನೌಕಾಪಡೆಗೆ ಹೊಸ ಕಣ್ಣು-ಕಿವಿ

Nehru-Patel Correspondence: ಭಾರತ ದೊಂದಿಗೆ ಕಾಶ್ಮೀರ ವಿಲೀನ; ನೆಹರು-ಪಟೇಲ್ ಪತ್ರ ವ್ಯವಹಾರ ಓದಿ; ಮೋದಿಗೆ ಖರ್ಗೆ ತಿರುಗೇಟು!

RSS ನಿಷೇಧಿಸಬೇಕು: ಖರ್ಗೆ ಹೇಳಿಕೆಗೆ ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?

SCROLL FOR NEXT