ಸಾಂದರ್ಭಿಕ ಚಿತ್ರ 
ದೇಶ

ಜೈಪುರ: ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಸಾವು; ಘಟನಾ ಸ್ಥಳದಲ್ಲಿ ರಕ್ತದ ಕಲೆಗಳೇ ಇಲ್ಲ! Video

ಸುಮಾರು 47 ಅಡಿ ಎತ್ತರದಿಂದ ಬಿದ್ದ ಈ ಬಾಲಕಿಯ ಸಾವು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿತ್ತು. ಪ್ರಾಥಮಿಕ ಸಾಕ್ಷ್ಯಾಧಾರಗಳು ಆತ್ಮಹತ್ಯೆ ಎಂದು ಸೂಚಿಸುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ: ಜೈಪುರದ ಖಾಸಗಿ ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ 9 ವರ್ಷದ ಬಾಲಕಿ ಶನಿವಾರ ಸಾವನ್ನಪ್ಪಿದ್ದಾಳೆ. ಪೊಲೀಸರ ಪ್ರಕಾರ, ಸಿಸಿಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಕಂಬಿಬೇಲಿಯನ್ನು ಹತ್ತಿ ಜಿಗಿಯುತ್ತಿರುವುದು ಕಂಡುಬಂದಿದ್ದು, ಆ ಪ್ರದೇಶದ ಇತರ ವಿದ್ಯಾರ್ಥಿಗಳು ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಸುಮಾರು 47 ಅಡಿ ಎತ್ತರದಿಂದ ಬಿದ್ದ ಈ ಬಾಲಕಿಯ ಸಾವು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿತ್ತು. ಪ್ರಾಥಮಿಕ ಸಾಕ್ಷ್ಯಾಧಾರಗಳು ಆತ್ಮಹತ್ಯೆ ಎಂದು ಸೂಚಿಸುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕೃತ್ಯದ ಹಿಂದಿನ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ.

ನೀರಜಾ ಮೋದಿ ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿದ 4 ನೇ ತರಗತಿ ವಿದ್ಯಾರ್ಥಿನಿ ಅಮೈರಾಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು ಎಂದು ಮಾನಸರೋವರ್ ಸ್ಟೇಷನ್ ಹೌಸ್ ಅಧಿಕಾರಿ ಲಖನ್ ಖತಾನಾ ತಿಳಿಸಿದ್ದಾರೆ.

ಅಧಿಕಾರಿಗಳು ಶಾಲೆಗೆ ತಲುಪಿದಾಗ, ಬಾಲಕಿ ಬಿದ್ದಿದ್ದ ಪ್ರದೇಶವನ್ನು ಸ್ವಚ್ಛಗೊಳಿಸಲಾಗಿದ್ದು, ಯಾವುದೇ ರಕ್ತದ ಕಲೆಗಳು ಕಾಣಿಸುತ್ತಿರಲಿಲ್ಲ. ಬಾಲಕಿಯ ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಅನುಮಾನಾಸ್ಪದ ಸಾವು ಎಂದು ಆರೋಪಿಸಿದ್ದಾರೆ. ಶಿಕ್ಷಕರು ಮತ್ತು ಸಿಬ್ಬಂದಿಯ ಪಾತ್ರದ ಬಗ್ಗೆ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದರು, ಶಾಲಾ ಆವರಣದಲ್ಲಿ ಇಂತಹ ಘಟನೆ ಹೇಗೆ ಸಂಭವಿಸಬಹುದು ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!