ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

SIR ವಿರುದ್ಧ ಕಾನೂನು ಹೋರಾಟಕ್ಕೆ ಕೇರಳ ಸರ್ಕಾರ ನಿರ್ಧಾರ; ಪ್ರತಿಪಕ್ಷಗಳಿಂದಲೂ ಬೆಂಬಲ

ಭಾರತೀಯ ಜನತಾ ಪಕ್ಷವನ್ನು ಹೊರತುಪಡಿಸಿ ಎಲ್ಲಾ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಬೆಂಬಲಿಸಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಅನುಷ್ಠಾನದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ.

ಇಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆನ್‌ಲೈನ್‌ ಮೂಲಕ ನಡೆಸಿದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷವನ್ನು ಹೊರತುಪಡಿಸಿ ಎಲ್ಲಾ ಪಕ್ಷಗಳು ಸರ್ಕಾರದ ಈ ಕ್ರಮವನ್ನು ಬೆಂಬಲಿಸಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವುದರಿಂದ, SIR ಅನ್ನು ಹೇಗೆ ಪ್ರಶ್ನಿಸಬೇಕು ಎಂಬುದರ ಕುರಿತು ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಕಾನೂನು ಸಲಹೆ ಪಡೆಯುತ್ತವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ನವೀಕರಿಸಿದ ಪಟ್ಟಿ ಈಗಾಗಲೇ ಜಾರಿಯಲ್ಲಿರುವಾಗ, 2002 ರ ಪಟ್ಟಿಗಳನ್ನು ಆಧರಿಸಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವುದು 'ಅವೈಜ್ಞಾನಿಕ' ಮತ್ತು 'ದುರುದ್ದೇಶಪೂರಿತ ಉದ್ದೇಶ'ವನ್ನು ಹೊಂದಿದೆ ಎಂದು ಕೇರಳ ಸಿಎಂ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಎತ್ತಿದ ಕಳವಳಗಳನ್ನು ಸಂಪೂರ್ಣವಾಗಿ ಒಪ್ಪುತ್ತೇವೆ ಮತ್ತು ಎಸ್ಐಆರ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದರೆ ಬೆಂಬಲಿಸಲು ಸಿದ್ಧರಿದ್ದೇವೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಅವರು ಹೇಳಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷ-ಮಾರ್ಕ್ಸ್‌ವಾದಿ ರಾಜ್ಯ ಕಾರ್ಯದರ್ಶಿ ಎಂ ವಿ ಗೋವಿಂದನ್ ಅವರು ಎಸ್ಐಆರ್ 'ಅಸಂವಿಧಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ' ಎಂದು ಟೀಕಿಸಿದರು.

ರಾಜ್ಯದಲ್ಲಿ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಬೂತ್ ಮಟ್ಟದ ಅಧಿಕಾರಿಗಳು(ಬಿಎಲ್‌ಒಗಳು) ಗಣತಿ ನಮೂನೆಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಮನೆಗಳಿಗೆ ಭೇಟಿ ನೀಡಲು ಆರಂಭಿಸಿದ ಒಂದು ದಿನದ ನಂತರ ಸರ್ವಪಕ್ಷ ಸಭೆ ನಡೆಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

SCROLL FOR NEXT