ದೇಶ

ಉತ್ತರ ಪ್ರದೇಶ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ; ಆರು ಮಹಿಳೆಯರು ಸಾವು; Video

ಚೋಪನ್ ಎಕ್ಸ್‌ಪ್ರೆಸ್‌ನಿಂದ ಹಳಿಯ ತಪ್ಪು ಭಾಗದಲ್ಲಿ ಇಳಿಯುವಾಗ ನೇತಾಜಿ ಎಕ್ಸ್‌ಪ್ರೆಸ್ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮಿರ್ಜಾಪುರ್ ಜಿಲ್ಲೆಯ ಚುನಾರ್ ರೈಲು ನಿಲ್ದಾಣಕ್ಕೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆದು ಆರು ಮಂದಿ ಮಹಿಳೆಯರು ಮೃತಪಟ್ಟಿರುವ ಘಟನೆ ಇಂದು ಬುಧವಾರ ನಡೆದಿದೆ.

ಚೋಪನ್ ಎಕ್ಸ್‌ಪ್ರೆಸ್‌ನಿಂದ ಹಳಿಯ ತಪ್ಪು ಭಾಗದಲ್ಲಿ ಇಳಿಯುವಾಗ ನೇತಾಜಿ ಎಕ್ಸ್‌ಪ್ರೆಸ್ ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಚೋಪನ್ ಎಕ್ಸ್‌ಪ್ರೆಸ್ ನಾಲ್ಕನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿತ್ತು. ಪಾದಚಾರಿ ಸೇತುವೆಯನ್ನು ಬಳಸುವ ಬದಲು, ಕೆಲವು ಪ್ರಯಾಣಿಕರು ನೇರವಾಗಿ ಹಳಿಗಳ ಮೇಲೆ ಇಳಿಯಲು ಪ್ರಯತ್ನಿಸಿದರು. ಇಂತಹ ಸಂದರ್ಭದಲ್ಲಿ ಹತ್ತಿರ ಬರುತ್ತಿದ್ದ ರೈಲು ಅವರ ಮೇಲೆ ಹರಿದಿದೆ ಎಂದು ಎನ್‌ಸಿಆರ್ ಪ್ರಯಾಗ್‌ರಾಜ್ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಅಮಿತ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಅವರು ಸ್ಥಳೀಯ ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ತಲುಪಲು ಮತ್ತು ತ್ವರಿತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಅಪಘಾತ ಸ್ಥಳದಲ್ಲಿ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳನ್ನು ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್