ವಿಜಯ್ 
ದೇಶ

ತಮಿಳುನಾಡು ವಿಧಾನಸಭಾ ಚುನಾವಣೆ 2026: ಸಿಎಂ ಅಭ್ಯರ್ಥಿಯಾಗಿ 'ವಿಜಯ್' ಹೆಸರಿಸಿದ TVK

ಸಭೆಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಭಾರತೀಯ ಮೀನುಗಾರರ ಪದೇ ಪದೇ ಬಂಧನ, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಕೊಯಮತ್ತೂರಿನಲ್ಲಿ ಇತ್ತೀಚಿಗೆ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ಒಟ್ಟು 12 ವಿಷಯಗಳ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ಮಹಾಬಲಿಪುರಂ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಪಕ್ಷದ ಅಧ್ಯಕ್ಷ ನಟ ವಿಜಯ್ ದಳಪತಿ ನೇತೃತ್ವದಲ್ಲಿ ಇಂದು ಚೆನ್ನೈ ಬಳಿಯ ಮಹಾಬಲಿಪುರಂನ ಖಾಸಗಿ ಹೋಟೆಲ್‌ನಲ್ಲಿ ವಿಶೇಷ ಸಭೆ ನಡೆಯಿತು.

ಸಭೆಯಲ್ಲಿ ಶ್ರೀಲಂಕಾ ನೌಕಾಪಡೆಯಿಂದ ತಮಿಳುನಾಡಿನ ಭಾರತೀಯ ಮೀನುಗಾರರ ಪದೇ ಪದೇ ಬಂಧನ, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ, ಕೊಯಮತ್ತೂರಿನಲ್ಲಿ ಇತ್ತೀಚಿಗೆ ಮಹಿಳೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ಒಟ್ಟು 12 ವಿಷಯಗಳ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ವಿಧಾನಸಭಾ ಚುನಾವಣೆಗೆ ಮೈತ್ರಿಕೂಟವನ್ನು ನಿರ್ಧರಿಸಲು ಪಕ್ಷದ ಸಂಸ್ಥಾಪಕರಿಗೆ ಅಧಿಕಾರ ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಎಲ್ಲಾ ವರ್ಗದ ಜನರಿಂದ ಪ್ರೀತಿಸಲ್ಪಡುವ ವಿಜಯ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಅವರ ನಾಯಕತ್ವದಲ್ಲಿ 2026 ರ ಚುನಾವಣೆಯನ್ನು ಎದುರಿಸಲಿದ್ದೇವೆ. ಚುನಾವಣಾ ಮೈತ್ರಿಕೂಟದ ಬಗ್ಗೆ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಲಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.

ಸೆಪ್ಟೆಂಬರ್ 27 ರಂದು ಕರೂರ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 41 ಜನರಿಗೆ ಸದಸ್ಯರು ಎರಡು ನಿಮಿಷಗಳ ಮೌನ ಆಚರಿಸಿದರು. ಟಿವಿಕೆ ಪಕ್ಷದ ಕಾರ್ಯಕ್ರಮಗಳಲ್ಲಿ ವಿಜಯ್ ಮತ್ತು ಸಾರ್ವಜನಿಕರಿಗೆ ಸಾಕಷ್ಟು ಪೊಲೀಸ್ ರಕ್ಷಣೆ ನೀಡಬೇಕೆಂದು ನಿರ್ಣಯವೊಂದರಲ್ಲಿ ಒತ್ತಾಯಿಸಲಾಗಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಲ್ಲಿಸುವಂತೆ ಪಕ್ಷ ಒತ್ತಾಯಿಸಿದೆ. ರಾಜ್ಯದಲ್ಲಿ ಪಕ್ಷದ ಬಗ್ಗೆ ಉತ್ತಮ ಪರಿಸ್ಥಿತಿಯಿದ್ದು, ಭವಿಷ್ಯದ ನಿರ್ಧಾರಗಳನ್ನು ತೆಗೆದುಕೊಳ್ಳಲು ವಿಜಯ್ ಸಭೆ ಕರೆದಿದ್ದರು.

ತಮಿಳುನಾಡಿನ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಟಿವಿಕೆ ಘೋಷಿಸಿದ್ದು, ಆಡಳಿತಾರೂಢ ಡಿಎಂಕೆಯನ್ನು ವಿಜಯ್ ತೀವ್ರವಾಗಿ ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕರ್ನಾಟಕದ ಗ್ಯಾರಂಟಿ ಮಾದರಿ' ಗುರುತಿಸಿ, ಹೆಚ್ಚಿನ ಆರ್ಥಿಕ ಬೆಂಬಲ ನೀಡಿ: ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹ

ICC ಮಹಿಳಾ ವಿಶ್ವಕಪ್ ಚಾಂಪಿಯನ್ಸ್: ಭಾರತ ತಂಡಕ್ಕೆ 'ಬಂಪರ್' ಬಹುಮಾನ ಘೋಷಿಸಿದ ಟಾಟಾ ಮೋಟಾರ್ಸ್!

'ಕೊಟ್ಟ ಮಾತು ಉಳಿಸಿಕೊಳ್ಳಿ': ಕ್ರಿಕೆಟ್ ದಂತಕಥೆ ಸುನೀಲ್ ಗವಾಸ್ಕರ್ ಗೆ ಜೆಮಿಮಾ ಆಗ್ರಹ! Video

EAM ಜೈಶಂಕರ್ ಮುಂದಿನ ವಾರ ಕೆನಡಾಕ್ಕೆ ಭೇಟಿ: ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು!

ಚುನಾವಣಾ ಆಯೋಗ ಕೇಂದ್ರದ ಜತೆ ಸೇರಿ ಪ್ರಜಾಪ್ರಭುತ್ವದ 'ಕತ್ತು ಹಿಸುಕುತ್ತಿದೆ': ಸಿದ್ದರಾಮಯ್ಯ

SCROLL FOR NEXT