ಬಿಹಾರ ಡಿಸಿಎಂ ವಾಹನದ ಮೇಲೆ ಚಪ್ಪಲಿ, ಕಲ್ಲು ತೂರಾಟ 
ದೇಶ

ಬಿಹಾರ ಡಿಸಿಎಂ ವಾಹನದ ಮೇಲೆ ಚಪ್ಪಲಿ, ಕಲ್ಲು ತೂರಾಟ: RJD ಗೂಂಡಾಗಳ ಮೇಲೆ ಬುಲ್ಡೋಜರ್ ನುಗ್ಗಿಸುತ್ತೇವೆ; DCM ವಿಜಯ್ ಸಿನ್ಹಾ ಆಕ್ರೋಶ, Video!

2025ರ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ನಡುವೆ ರಾಜಕೀಯ ಕಾವು ಉತ್ತುಂಗಕ್ಕೇರಿದೆ. ಲಖಿಸರಾಯ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು, ಮಣ್ಣು, ಸಗಣಿ ಮತ್ತು ಬೂಟುಗಳಿಂದ ದಾಳಿ ಮಾಡಲಾಗಿದೆ.

2025ರ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ನಡುವೆ ರಾಜಕೀಯ ಕಾವು ಉತ್ತುಂಗಕ್ಕೇರಿದೆ. ಲಖಿಸರಾಯ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು, ಮಣ್ಣು, ಸಗಣಿ ಮತ್ತು ಬೂಟುಗಳಿಂದ ದಾಳಿ ಮಾಡಲಾಗಿದೆ. ಈ ಘಟನೆಯು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ ಮಾತ್ರವಲ್ಲದೆ ಡಿಸಿಎಂ ವಿಜಯ್ ಕುಮಾರ್ ಅವರು, ಲಖಿಸರಾಯ್ ಪೊಲೀಸ್ ವರಿಷ್ಠಾಧಿಕಾರಿ (SP) ಅಜಯ್ ಕುಮಾರ್ ಅವರ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಎಸ್ ಪಿಯನ್ನು ದುರ್ಬಲ ಮತ್ತು ಹೇಡಿ ಎಂದು ಕರೆದಿದ್ದಾರೆ.

ಮೊದಲ ಹಂತದ ಮತದಾನದ ಸಮಯದಲ್ಲಿ, ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ ತಮ್ಮ ಕ್ಷೇತ್ರದ ಮತಗಟ್ಟೆಗಳನ್ನು ಪರಿಶೀಲಿಸಲು ಹೋಗುತ್ತಿದ್ದರು. ಅವರು ಜಿಲ್ಲೆಯ ರಾಮಗಢ ಚೌಕ್ ಪೊಲೀಸ್ ಠಾಣೆ ಪ್ರದೇಶದ ಖೋರಿಯಾರಿ ಪ್ರದೇಶದ ಮೂಲಕ ಹಾದುಹೋಗುತ್ತಿದ್ದರು. ಅಲ್ಲಿ ಮತಗಟ್ಟೆ ಸಂಖ್ಯೆ 404 ಮತ್ತು 405 ಇದೆ. ಇದ್ದಕ್ಕಿದ್ದಂತೆ, ಕೆಲವರು ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದರು. ದಾಳಿಕೋರರು ಕಲ್ಲುಗಳನ್ನು ಮಾತ್ರವಲ್ಲದೆ ಮಣ್ಣು, ಹಸುವಿನ ಸಗಣಿ ಮತ್ತು ಬೂಟುಗಳನ್ನು ಸಹ ಎಸೆದರು. ಅವರು ಜೋರಾಗಿ ಘೋಷಣೆಗಳನ್ನು ಕೂಗಿದರು.

ಸಿನ್ಹಾ ಪ್ರಕಾರ, ಹಿಂದುಳಿದ ವರ್ಗಗಳ ಮತದಾರರನ್ನು ಬೆದರಿಸುತ್ತಿದ್ದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿಗರು ಈ ದಾಳಿ ನಡೆಸಿದ್ದಾರೆ. ಘಟನೆಯ ನಂತರ ಉಪಮುಖ್ಯಮಂತ್ರಿ ಪ್ರತಿಭಟನೆ ನಡೆಸಿದರು. ಆರ್‌ಜೆಡಿ ಗೂಂಡಾಗಳು ಮತದಾನಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಪೊಲೀಸರ ಮೌನ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಅವರು ಆರೋಪಿಸಿದರು. ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಪ್ರತಿಭಟನೆಯನ್ನು ಕೊನೆಗೊಳಿಸಲು ಸ್ಥಳಕ್ಕೆ ಬಂದರು. ಇಬ್ಬರೂ ತ್ವರಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದು ಹೀಗಾಗಿ ಸಿನ್ಹಾ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದರು.

ಚುನಾವಣಾ ಆಯೋಗವು ಈ ಘಟನೆಯ ಗಂಭೀರತೆ ಅರಿತುಕೊಂಡಿದ್ದು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಸೂಚನೆಗಳನ್ನು ನೀಡಿದೆ. ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ದೊಡ್ಡ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ತಮ್ಮ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ವಿಜಯ್ ಕುಮಾರ್ ಸಿನ್ಹಾ ಅವರು, ಆರ್ ಜೆಡಿ ಗೂಂಡಾಗಳ ಮನೆ ಮೇಲೆ ಬುಲ್ಡೋಜರ್ ನುಗ್ಗಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ವಿಧಾನಸಭೆ ಚುನಾವಣೆ: ಮೊದಲ ಹಂತದ ಚುನಾವಣೆ ಮುಕ್ತಾಯ, ಒಟ್ಟಾರೇ ಶೇ. 60,25 ರಷ್ಟು ಮತದಾನ!

ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ತೀವ್ರ: ಸಂಪುಟ ಸಭೆ ನಂತರ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ರೈತರ ಆಕ್ರೋಶದ ಕಿಚ್ಚು: ಸಚಿವ ಶಿವಾನಂದ ಪಾಟೀಲ್ ಕಾರ್ ಮೇಲೆ ಚಪ್ಪಲಿ, ನೀರಿನ ಬಾಟಲ್ ಎಸೆದು ಆಕ್ರೋಶ!

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ 5 ಸಚಿವರು ಸೇರಿ 67 ಶಾಸಕರ ಪಟ್ಟಿ ಬಿಡುಗಡೆ

ಕಬ್ಬು ಬೆಳೆಗಾರರ ಪ್ರತಿಭಟನೆ: 'ಕೇಂದ್ರದ ಕಡೆ ಬೊಟ್ಟು', ಕೈ ತೊಳೆದುಕೊಳ್ಳುವ ಪ್ರಯತ್ನ, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ!

SCROLL FOR NEXT